ಜಮ್ಮು: ಯಾರಾದರೂ ಪಿಡಿಪಿಯನ್ನು ಒಡೆಯಲು ಯತ್ನಿಸಿದರೆ 1987ರ ತುರ್ತು ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಎಚ್ಚರಿಕೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಡಿಪಿಯನ್ನು ಒಡೆಯಲು ಯತ್ನಿಸಿದರೆ ಯಾಸಿನ್‌ ಮಲೀಕ್‌ ಮತ್ತು ಸಯ್ಯದ್‌ ಸಲಾಲುದ್ದೀನ್‌ ಅವರಂತಹ ಪ್ರತ್ಯೇಕವಾದಿಗಳ ಜನ್ಮಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. 



ಕೆಲದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಯು ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿತ್ತು. ಇದರಿಂದ ಸದ್ಯ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸಲು ಪಿಡಿಪಿ ಬಂಡುಕೋರ ಮತ್ತು ಪಕ್ಷೇತರ ಶಾಸಕರೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂಬ ವರದಿಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮೆಹಬೂಬಾ ಮುಫ್ತಿ ಈ ಎಚ್ಚರಿಕೆ ನೀಡಿದ್ದಾರೆ.