Shopian-Tral encounter : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅವಂತಿಪುರದ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಮುಖಾಮುಖಿಯಲ್ಲಿ ಒಟ್ಟು ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 


COMMERCIAL BREAK
SCROLL TO CONTINUE READING

ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರೆ, ಟ್ರಾಲ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. 


Shopian) ಎನ್‌ಕೌಂಟರ್‌ ನಡುವೆ ಅವಂತಿಪೋರಾ ಟ್ರಾಲ್ನ ನೌಬಗ್ ಪ್ರದೇಶದಲ್ಲಿ ಕೂಡ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಮುಖಾಮುಖಿ ಪ್ರಾರಂಭವಾಗಿದೆ ಮತ್ತು ಈ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು ಒಂದು ಗಂಟೆಯೊಳಗೆ ಇಬ್ಬರು ಭಯೋತ್ಪಾದಕರನ್ನು ಸದೆಬಡಿದಿದ್ದಾರೆ. ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಇನ್ನೂ ಗುರುತಿಸಲಾಗಿಲ್ಲ. ಆದರೆ ಭದ್ರತಾ ಪಡೆಗಳ ಪ್ರಕಾರ, ಈ ಇಬ್ಬರು ಭಯೋತ್ಪಾದಕರನ್ನು ಸ್ಥಳೀಯರೆಂದು ಹೇಳಲಾಗುತ್ತಿದೆ.


ಪ್ರಧಾನಿ ಮೋದಿಗೆ ಪತ್ರ ಬರೆದು ಪಾಕ್ ಪಿಎಂ ಇಮ್ರಾನ್ ಖಾನ್ ಮನವಿ ಮಾಡಿದ್ದೇನು?


ಪೊಲೀಸರ ಪ್ರಕಾರ, ಟ್ರಾಲ್‌ನಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ (Encounter) ಅಪರಿಚಿತ ಭಯೋತ್ಪಾದಕನೂ ಸಾವನ್ನಪ್ಪಿದ್ದಾನೆ. ಅವಂತಿಪೋರಾದ ಟ್ರಾಲ್ ಪ್ರದೇಶದಲ್ಲಿ ಎನ್‌ಕೌಂಟರ್‌ ಪ್ರಾರಂಭವಾಗಿದೆ. ಈ ಭಾಗದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.


Amarnath Yatra 2021: ಜೂನ್ 28 ರಿಂದ ಅಮರನಾಥ್ ಯಾತ್ರೆ ಆರಂಭ, ಏಪ್ರಿಲ್ 1 ರಿಂದ ನೋಂದಣಿ


ಅದೇ ಸಮಯದಲ್ಲಿ ಕಳೆದ ಗುರುವಾರ ಮಧ್ಯಾಹ್ನದಿಂದ ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್ ಮುಂದುವರೆದಿದೆ. ಭದ್ರತಾ ಪಡೆಗಳು ಈವರೆಗೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಅನ್ಸಾರ್ ಗಜ್ವತ್-ಉಲ್-ಹಿಂದ್ ಎಜಿಎಚ್‌ನ ಕಮಾಂಡರ್ ಇಮ್ತಿಯಾಜ್ ಅವರ ಸಹಚರರೊಂದಿಗೆ ಮಸೀದಿಯಲ್ಲಿ ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮಸೀದಿಯ ಇಮಾಮ್ ಮತ್ತು ಭಯೋತ್ಪಾದಕನ ಸಹೋದರನನ್ನು ಶರಣಾಗುವಂತೆ ಮನವೊಲಿಸಲು ಪ್ರಯತ್ನಿಸಿದವು. ಆದರೆ ಶರಣಾಗಲು ಒಪ್ಪದ ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕರು ಇಂದು ಬೆಳಿಗ್ಗೆಯಿಂದ ಭದ್ರತಾ ಪಡೆಗಳ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ ಎಂದು ತಿಳಿದುಬಂದಿದೆ.


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.