ನವದೆಹಲಿ: ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಹಿಂದ್ ಸೀತಾ ಪೋರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಇನ್ನು ಅಧಿಕೃತ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.


COMMERCIAL BREAK
SCROLL TO CONTINUE READING

ಇನ್ನೂ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದ್ದು, ಶಸ್ತ್ರಾಸ್ತ್ರಗಳು ಮತ್ತು ಯುದ್ಧಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.



ಕಳೆದ ವಾರ, ಶೋಫಿಯನ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರು ಹತ್ಯೆಯಾಗಿದ್ದರು.