ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಬಿಲಾಲಾಬಾದ್ ಗ್ರಾಮದಲ್ಲಿ ಮಂಗಳವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಸಂಭವಿಸಿದೆ. ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಉನ್ನತ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದು ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅವಂತಿಪುರ ಪೊಲೀಸರು ಮತ್ತು ಸ್ಥಳೀಯ ಭದ್ರತಾ ಪಡೆ ಘಟಕವು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಮತ್ತು ಪೊಲೀಸರ ಮೇಲೆ ಗುಂಡಿನ ಮಳೆ ಸುರಿಸಿದೆ ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಇದು ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ ಎನ್ಕೌಂಟರ್ ಮತ್ತು ಕೊನೆಯ 48 ಗಂಟೆಗಳಲ್ಲಿ ಮೂರನೆಯದು. ಹಿಂದಿನ ಮಂಗಳವಾರ ಬಿಜ್ಬೆಹರಾ ಕಾರ್ಯಾಚರಣೆಯು 3 ದಿನಗಳ ಹಿಂದೆ ಸಿಆರ್ಪಿಎಫ್ ಜವಾನ್ ಮತ್ತು ಮಗುವನ್ನು ಕೊಲ್ಲಲು ಕಾರಣವಾದ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ.


ಅನಂತ್‌ನಾಗ್‌ನಲ್ಲಿ ಹಿಜ್ಬುಲ್ನ ಟಾಪ್ ಕಮಾಂಡರ್ ಮಸೂದ್ ಹತ್ಯೆ


ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಮೇರೆಗೆ ಪೊಲೀಸ್, 42 ಆರ್‌ಆರ್ ಮತ್ತು ಸಿಆರ್‌ಪಿಎಫ್ ಜಂಟಿ ತಂಡವು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ" ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.


ಭದ್ರತಾ ಪಡೆಗಳ ಜಂಟಿ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ ತಲೆಮರೆಸಿಕೊಂಡಿದ್ದ ಭಯೋತ್ಪಾದಕರನ್ನು ಮೊದಲು ಶರಣಾಗುವಂತೆ ಕೇಳಲಾಯಿತು. ಆದರೆ ಅವರು ಭದ್ರತಾ ಪಡೆಗಳ ಮೇಲೆಯೇ ಗುಂಡು ಹಾರಿಸಿದರು, ಈ ಸಂದರ್ಭದಲ್ಲಿ ಎನ್‌ಕೌಂಟರ್‌ ಆರಂಭವಾಗಿದೆ ಎಂದು ಹೇಳಲಾಗಿದೆ.


ಕಾಶ್ಮೀರ ಪೊಲೀಸ್ ವಲಯವು "ಟ್ರಾಲ್ನ ಬಿಲಾಲಾಬಾದ್ ಪ್ರದೇಶದಲ್ಲಿ ಎನ್‌ಕೌಂಟರ್‌ (Encounter)   ಪ್ರಾರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ" ಎಂದು ಟ್ವೀಟ್ ಮಾಡಿದ್ದಾರೆ.


ಮೂಲಗಳ ಪ್ರಕಾರ, ಎರಡು ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ನಂಬಲಾಗಿದೆ.


ಇದು ಮಂಗಳವಾರ ನಡೆದ ಎರಡನೇ ಮುಖಾಮುಖಿ ಮತ್ತು ದಕ್ಷಿಣ ಕಾಶ್ಮೀರದಲ್ಲಿ ಕಳೆದ 48 ಗಂಟೆಗಳಲ್ಲಿ ನಡೆದ ಮೂರನೆಯ ಎನ್ಕೌಂಟರ್ ಆಗಿದೆ. ಅನಂತ್‌ನಾಗ್‌ನ ವಘಮಾ ಬಿಜ್‌ಬೆಹರಾ ಪ್ರದೇಶದಲ್ಲಿ ಮತ್ತು ಖುಲ್ ಚೋಹರ್ ರಾಣಿಪೋರಾ ಅನಂತ್‌ನಾಗ್‌ನಲ್ಲಿ ಕಳೆದ ಎರಡು ಎನ್‌ಕೌಂಟರ್‌ಗಳಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜೂನ್‌ನಲ್ಲಿ 48 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಕಾಶ್ಮೀರದಲ್ಲಿ ಕೊಲ್ಲಲ್ಪಟ್ಟ ಒಟ್ಟು ಭಯೋತ್ಪಾದಕರ ಸಂಖ್ಯೆ 116 ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 128 ಆಗಿದೆ.