Jammu-Kashmir: ಪಾಂಪೋರ್ನಲ್ಲಿ ಭದ್ರತಾ ಪಡೆಗಳು, ಭಯೋತ್ಪಾದಕರ ನಡುವೆ ಗುಂಡಿನ ಕಾಳಗ, ಓರ್ವ ಉಗ್ರನ ಹತ್ಯೆ
ಗುರುವಾರ, ಶ್ರೀನಗರದ ಸರಾಫ್ ಕಡಲ್ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಎರಡು ಗ್ರೆನೇಡ್‌ಗಳನ್ನು ಎಸೆದರು. ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 3 ಜನರು ಗಾಯಗೊಂಡಿದ್ದಾರೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ಪಂಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶುಕ್ರವಾರ ಎನ್ಕೌಂಟರ್ ನಡೆಯಿತು. ಈ ಎನ್ಕೌಂಟರ್ ನಲ್ಲಿ ಭದ್ರತಾ ಪಡೆಗಳು ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರನ್ನು ಇನ್ನೂ ಗುರುತಿಸಲಾಗಿಲ್ಲ.
ಗುರುವಾರ, ಶ್ರೀನಗರದ ಸರಾಫ್ ಕಡಲ್ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ (Security Forces) ಮೇಲೆ 2 ಗ್ರೆನೇಡ್‌ಗಳನ್ನು ಎಸೆದಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 3 ಜನರು ಗಾಯಗೊಂಡಿದ್ದಾರೆ.
ಇದನ್ನೂ ಓದಿ - ಬದಲಾಗಿದೆ Traffic Rules, ಈಗ ಕೇವಲ ಫೋಟೋ ತೆಗೆದು ನೋಟೀಸ್ ಕಳುಹಿಸುವಂತಿಲ್ಲ
ಗುರುವಾರ, ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ಆರಂಭವಾಯಿತು. ಈ ಎನ್ಕೌಂಟರ್ ನಲ್ಲಿ, ಭಾರತೀಯ ಸೇನೆಯ (Indian Army) ಜೆಸಿಒ ಕೊಲ್ಲಲ್ಪಟ್ಟರು. ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭವಾಯಿತು.
ಇದನ್ನೂ ಓದಿ - Liquor: ಮದ್ಯ ಖರೀದಿಸುವ ಮುನ್ನ ಹೊಸ ನಿಯಮವನ್ನು ತಪ್ಪದೇ ತಿಳಿಯಿರಿ
ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಇದೇ ಪ್ರದೇಶದಲ್ಲಿ ಆಗಸ್ಟ್ 6 ರಂದು ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದವು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ