Jammu and Kashmi: ಸೋಪೋರ್‌ನಲ್ಲಿ ಎನ್ಕೌಂಟರ್, ಇಬ್ಬರು ಭಯೋತ್ಪಾದಕರ ಹತ್ಯೆ

Jammu and Kashmir: ಮಂಗಳವಾರ ಮುಂಜಾನೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

Written by - Zee Kannada News Desk | Last Updated : Aug 24, 2021, 01:52 PM IST
  • ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಎನ್ಕೌಂಟರ್
  • ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ
  • ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ
Jammu and Kashmi: ಸೋಪೋರ್‌ನಲ್ಲಿ ಎನ್ಕೌಂಟರ್, ಇಬ್ಬರು ಭಯೋತ್ಪಾದಕರ ಹತ್ಯೆ  title=
File Image

ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ನಡೆದ ಎನ್ಕೌಂಟರ್‌ನಲ್ಲಿ  ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ. ಸುದ್ದಿಸಂಸ್ಥೆ ಎಎನ್ಐ ಪ್ರಕಾರ, ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಈ ಎನ್ಕೌಂಟರ್ ನಡೆದಿದೆ. ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿವೆ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸೋಮವಾರ ತಡರಾತ್ರಿ ಸೋಪೋರ್‌ನ ಪೆಥ್‌ಸೀರ್‌ನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ಮಂಗಳವಾರ ಮುಂಜಾನೆ ಭಯೋತ್ಪಾದಕರು ಭದ್ರತಾ ಪಡೆಗಳ (Security Force) ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಕಾರ್ಯಾಚರಣೆ ಎನ್ಕೌಂಟರ್ ಆಗಿ ಬದಲಾಯಿತು. ಭದ್ರತಾ ಪಡೆಗಳು ಕೂಡ ಗುಂಡಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ- Bank Holidays: ಈ ವಾರ ಸತತ 4 ದಿನಗಳವರೆಗೆ ಬ್ಯಾಂಕ್‌ಗೆ ರಜೆ, ಇಲ್ಲಿದೆ ಫುಲ್ ಲಿಸ್ಟ್

ಆಗಸ್ಟ್ 21 ರಂದು ಮೂವರು ಜೈಶ್ ಭಯೋತ್ಪಾದಕರನ್ನು ಕೊಲ್ಲಲಾಯಿತು:
ಈ ಹಿಂದೆ ಆಗಸ್ಟ್ 21 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು (JeM Terrorist) ಹತರಾಗಿದ್ದರು. ಭಯೋತ್ಪಾದಕರ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರ ಜಿಲ್ಲೆಯ ನಾಗ್‌ಬೆರಾನ್ ತ್ರಾಲ್‌ನ ಅರಣ್ಯ ಪ್ರದೇಶದಲ್ಲಿ ಎತ್ತರದ ಪ್ರದೇಶಗಳಲ್ಲಿ ಕಾರ್ಡನ್‌ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದವು. ಇದರ ನಂತರ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ನಂತರ ಎನ್ಕೌಂಟರ್ ಆರಂಭವಾಯಿತು. ಈ ಗುಂಡಿನ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ಇದನ್ನೂ ಓದಿ- Rail Ticket Booking: ರೈಲಿನಲ್ಲಿ ಟಿಕೆಟ್ ಬುಕ್ ಮಾಡಲು ಇನ್ಮುಂದೆ ಈ ದಾಖಲೆಗಳು ಅಗತ್ಯ! IRCTCಯಿಂದ ಸಿದ್ಧತೆ

ಜೆಸಿಒ ಅಧಿಕಾರಿ ಕಳೆದ ವಾರ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದರು:
ಇದಕ್ಕೂ ಮೊದಲು ಗುರುವಾರ, ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಎನ್‌ಕೌಂಟರ್‌ನಲ್ಲಿ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಹುತಾತ್ಮರಾದರು ಮತ್ತು ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನನ್ನು ಕೂಡ ಕೊಲ್ಲಲಾಯಿತು. ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಜಮ್ಮು) ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ಅವರು ದಾನ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಜೆಸಿಒ ಸುಬೇದಾರ್ ರಾಮ್ ಸಿಂಗ್ ನೇತೃತ್ವದ ತಂಡವು ಹತ್ತಿರದ ದಟ್ಟ ಅರಣ್ಯದಲ್ಲಿ ಅಡಗಿದ್ದ ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿದೆ. ಇದರಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಮತ್ತು ಸುಬೇದಾರ್ ರಾಮ್ ಸಿಂಗ್ ಕೂಡ ಬುಲೆಟ್ ಗಳಿಂದ ಗಾಯಗೊಂಡರು ಎಂದು ಅಧಿಕಾರಿ ಹೇಳಿದರು. ಸಿಂಗ್ ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಯಿತು ಮತ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ,  ಅವರ ಜೀವವನ್ನು ಉಳಿಸಲಾಗಲಿಲ್ಲ ಎಂದು ಅವರು ಹೇಳಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News