Encounter in Rajouri: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಇದರಲ್ಲಿ ಭದ್ರತಾ ಪಡೆಗಳು ಮತ್ತು ಪೋಲಿಸರು ರಾಜೌರಿಯ ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ (Indian Army) 16 ನೇ ಕಾರ್ಪ್ಸ್, "ರಾಜೌರಿಯ ಥಾನಮಂಡಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ, ಕಾರ್ಯಾಚರಣೆ ನಡೆಯುತ್ತಿದೆ" ಎಂದು ಮಾಹಿತಿ ನೀಡಿದೆ.


Jammu-Kashmir : 10 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿ ಬಿಡುಗಡೆ


ಜಮ್ಮು ಪ್ರದೇಶದ (ಎಡಿಜಿಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್, ಈ ಪ್ರದೇಶದಲ್ಲಿ ಮೂರು-ನಾಲ್ಕು ಭಯೋತ್ಪಾದಕರ ಗುಂಪು ಅಡಗಿದ್ದು ಅದರಲ್ಲಿ ಇಬ್ಬರು ವಿದೇಶಿ ಭಯೋತ್ಪಾದಕರು (Terrorist) ಎಂದು ತಿಳಿದುಬಂದಿದೆ. ಅವರು ಕಾಶ್ಮೀರದಿಂದ ಈ ಕಡೆಗೆ ಬಂದಿದ್ದಾರೆ ಎಂದು ಅನುಮಾನವಿದೆ. ಕಳೆದ ಒಂದು ತಿಂಗಳಿನಿಂದ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಗುಂಪನ್ನು ಹುಡುಕುತ್ತಿವೆ ಎಂದು ಹೇಳಿದರು.


ಇದನ್ನೂ ಓದಿ- Atal Pension Yojana: ಪ್ರತಿದಿನ 7 ರೂ. ಉಳಿಸಿ, ತಿಂಗಳಿಗೆ 5000 ರೂ. ಪಡೆಯಿರಿ


ಇಂದು, ನಮಗೆ ಥಾನಮಂಡಿಯಿಂದ ಮಾಹಿತಿ ಸಿಕ್ಕಿತು ಮತ್ತು ಭಯೋತ್ಪಾದಕರು ಅರಣ್ಯ ಪ್ರದೇಶವನ್ನು ತಲುಪಿದ ತಕ್ಷಣ ಎನ್ಕೌಂಟರ್ ಆರಂಭವಾಯಿತು. ಅಂತಿಮ ವರದಿ ಬರುವವರೆಗೂ ಎನ್ಕೌಂಟರ್ ನಡೆದಿತ್ತು. ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ರಜೌರಿಯ ಪೊಲೀಸ್ ವರಿಷ್ಠಾಧಿಕಾರಿ ಶೀಮಾ ನಬಿ ಕಸ್ಬಾ ಕೂಡ ಈ ಪ್ರದೇಶದಲ್ಲಿ ನಡೆದ ಎನ್ಕೌಂಟರ್ ಅನ್ನು ಖಚಿತಪಡಿಸಿದ್ದಾರೆ ಎಂದು ಸಿಂಗ್ ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ