ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆಯಿಂದ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಆಪರೇಷನ್ (ಸಿಎಎಸ್ಒ) ಅನ್ನು ಪ್ರಾರಂಭಿಸಿದ್ದವು.
ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ಕಾಳಗ ನಡೆಸಿದ್ದು, ಪ್ರತೀಕಾರವಾಗಿ ಭದ್ರತಾ ಪಡೆಯಿಂದಲೂ ಗುಂಡು ಹಾರಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರದೇಶದಲ್ಲಿ ಅಡಗಿರುವ ಉಗ್ರರಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೋನಿಯಾರ್ ಪ್ರದೇಶದಲ್ಲಿ ಜೂನ್ 22 ರಂದು ಭದ್ರತಾ ಪಡೆ ಮತ್ತು ಉಗ್ರರ ನಡೆವಿನ ಮುಖಾಮುಖಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು.