ಶ್ರೀನಗರ: ಮಂಗಳವಾರ (ಮೇ 19) ಮುಂಜಾನೆ ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಶ್ರೀನಗರದ ನವಕಾಡಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡ ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಹಳೆಯ ಶ್ರೀನಗರ (Srinagar) ನಗರದ ನವಕಾಡಲ್‌ನಲ್ಲಿ ಕೆಲವು ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶಕ್ಕೆ ಕಾಲಿಡುತ್ತಿದ್ದಂತೆ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಮೂಲಗಳು ಝೀ ಮೀಡಿಯಾಕ್ಕೆ ತಿಳಿಸಿವೆ. 


ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೆಂಟ್ರಲ್ ರಿಸರ್ವ್ ಪೋಲಿಸ್ ಜಂಟಿ ತಂಡವು ಆ ಪ್ರದೇಶದಿಂದ ಹೊರಗುಳಿದು ಭಯೋತ್ಪಾದಕರು ಅಡಗಿದ್ದ ಮನೆಯನ್ನು ಪತ್ತೆ ಹಚ್ಚಿದ್ದರಿಂದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ಮಳೆ ಸುರಿಸಿದ್ದಾರೆ.


ಈ ಸಂದರ್ಭದಲ್ಲಿ ಭದ್ರತಾ ಪಡೆಯ ಜಂಟಿ ತಂಡ ಎನ್‌ಕೌಂಟರ್ (Encounter) ಆರಂಭಿಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿ ತಂಡದಿಂದ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.


ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಿಶೇಷವೆಂದರೆ, ಸುಮಾರು ಎರಡು ವರ್ಷಗಳ ಅಂತರದ ನಂತರ ಶ್ರೀನಗರದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಮೊದಲ ಎನ್‌ಕೌಂಟರ್ ಇದಾಗಿದೆ.