ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್ಕೌಂಟರ್; ಓರ್ವ ಉಗ್ರ ಸಾವು

ಪೊಲೀಸ್ ಅಧಿಕಾರಿ ಪ್ರಕಾರ, ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಸೇನೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. 

Updated: Dec 28, 2018 , 11:48 AM IST
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್ಕೌಂಟರ್; ಓರ್ವ ಉಗ್ರ ಸಾವು
File Image

ನವದೆಹಲಿ: ಶುಕ್ರವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ರಂಗೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಥಳದಲ್ಲಿ ಇನ್ನೂ ಕೆಲವು ಉಗ್ರರು ಅಡಗಿ ಕುಳಿತ್ತಿದ್ದಾರೆ ಎನ್ನಲಾಗಿದೆ.

ಪೊಲೀಸ್ ಅಧಿಕಾರಿ ಪ್ರಕಾರ, ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಸೇನೆ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಯೋಧರು ಓರ್ವನನ್ನು ಹತ್ಯೆಗೈದಿದ್ದಾರೆ.

FILE IMAGE

ಅದೇ ಸಮಯದಲ್ಲಿ, ಪ್ರದೇಶದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು ಕಾರ್ಯಾಚರಣೆ ಮುಂದುವರೆದಿದೆ.