ನವದೆಹಲಿ: 'ಬುಲ್ಲಿ ಬಾಯಿ' ಆ್ಯಪ್ ಪ್ರಕರಣಕ್ಕೆ (Bulli Bai app case) ಸಂಬಂಧಿಸಿದಂತೆ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಮುಂಬೈ ಪೊಲೀಸ್ ಸೈಬರ್ ಸೆಲ್ ಸೋಮವಾರ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದೆ.


COMMERCIAL BREAK
SCROLL TO CONTINUE READING

ಮುಂಬೈ ಪೊಲೀಸರು (Mumbai Police) ಶಂಕಿತ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸಿಲ್ಲ. ಆತನನ್ನು ಮುಂಬೈಗೆ ಕರೆತಂದು ವಿಚಾರಣೆ ನಡೆಸಲಾಗುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಶಂಕಿತರಿದ್ದು, ಅವರನ್ನೂ ಬಂಧಿಸುವ ಸಾಧ್ಯತೆ ಇದೆ.


ಮಹಾರಾಷ್ಟ್ರದ ಗೃಹ ಸಚಿವ ಸತೇಜ್ ಪಾಟೀಲ್ ಅವರು ಈ ಸಮಯದಲ್ಲಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದಿಲ್ಲ ಏಕೆಂದರೆ ಇದು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದಿದ್ದಾರೆ.


ವಿವಾದಾತ್ಮಕ ಬುಲ್ಲಿ ಬಾಯಿ ಅಪ್ಲಿಕೇಶನ್ ಅನ್ನು ಜನವರಿ 1 ರಂದು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ. ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಅವಹೇಳನಕಾರಿ ವಿಷಯದೊಂದಿಗೆ ಒಳಗೊಂಡಿದೆ.


ಆಕ್ಷೇಪಾರ್ಹ ವಿಷಯದ ದೂರುಗಳ ನಂತರ ಹೋಸ್ಟಿಂಗ್ ಪ್ಲಾಟ್‌ಫಾರ್ಮ್ GitHub ನಿಂದ ಅಪ್ಲಿಕೇಶನ್ ಅನ್ನು ನಂತರ ನಿರ್ಬಂಧಿಸಲಾಗಿದೆ.


ಪೊಲೀಸರು ಅಪರಿಚಿತ ಅಪರಾಧಿಗಳ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: 'Bulli Bai' ಆ್ಯಪ್ ಏನಿದು? ಇವರ ಟಾರ್ಗೆಟ್ ಮುಸ್ಲಿಂ ಮಹಿಳೆಯರೆ ಯಾಕೆ? ಇಲ್ಲಿದೆ ನೋಡಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.