ನವದೆಹಲಿ: ದೇಶಾದ್ಯಂತ ತೈಲ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ಇಂದೂ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಪೆಟ್ರೋಲ್ ಬೆಲೆ 24 ಪೈಸೆ ಮತ್ತು ಡೀಸೆಲ್ ಬೆಲೆ 26 ಪೈಸೆ ಹೆಚ್ಚಳವಾಗಿದೆ. ಈ ಬೆಲೆಗಳು ಮಾರ್ಚ್ 31, 2018ರ ಬೆಳಿಗ್ಗೆ 6:00 ಗಂಟೆಯಿಂದ ಅನ್ವಯಿಸುತ್ತದೆ. 


COMMERCIAL BREAK
SCROLL TO CONTINUE READING

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತದೆ. 


ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ


ನಗರಗಳು  ಪೆಟ್ರೋಲ್(ರೂ / ಲೀಟರ್) ಡೀಸೆಲ್ (ರೂ / ಲೀಟರ್)
ನವದೆಹಲಿ 73.55 64.40
ಕೋಲ್ಕತ್ತಾ 76.26 67.09
ಮುಂಬೈ 81.41 68.58
ಚೆನ್ನೈ 76.29 67.93
ಬೆಂಗಳೂರು 74.71 65.49
ಹೈದರಾಬಾದ್ 77.89 69.97
ತಿರುವನಂತಪುರಂ 77.49 69.89

https://www.iocl.com/TotalProductList.aspx