ಮುಂದಿನ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ಸಿಗಲಿದೆ ನಿರುದ್ಯೋಗಿ ಭತ್ಯೆ

Unemployment Allowance : ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ . ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ತಮ್ಮ ಮನೆ ನಿರ್ಮಾಣಕ್ಕಾಗಿ  50 ಸಾವಿರ ರೂಪಾಯಿ ಅನುದಾನ. 

Written by - Ranjitha R K | Last Updated : Jan 26, 2023, 06:19 PM IST
  • ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ
  • ಪ್ರತಿ ತಿಂಗಳು ಯುವಕರಿಗೆ ನಿರುದ್ಯೋಗ ಭತ್ಯೆ
  • ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಘೋಷಣೆ
ಮುಂದಿನ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ಸಿಗಲಿದೆ ನಿರುದ್ಯೋಗಿ ಭತ್ಯೆ  title=

Unemployment Allowance : ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಘೋಷಿಸಿದ್ದಾರೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಮಾತ್ರವಲ್ಲ ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವ ಹೊಸ ಯೋಜನೆ ಮತ್ತು ನಿರ್ಮಾಣ ಕಾರ್ಮಿಕರಿಗಾಗಿ ಮುಖ್ಯಮಂತ್ರಿ ನಿರ್ಮಾಣ್ ಶ್ರಮಿಕ್ ಆವಾಸ್ ಸಹಾಯತಾ ಯೋಜನೆ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಿದ್ದಾರೆ.  

ಪ್ರತಿ ತಿಂಗಳು ಯುವಕರಿಗೆ ನಿರುದ್ಯೋಗ ಭತ್ಯೆ :
ಮುಂದಿನ ಹಣಕಾಸು ವರ್ಷದಿಂದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಬಾಘೆಲ್ ಹೇಳಿದ್ದಾರೆ.  ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದ ಬಳಿ ಪ್ರಯಾಣಿಕರ ಸೌಕರ್ಯ, ವಿಮಾನ ನಿಲ್ದಾಣ ಪ್ರದೇಶದ ವಾಣಿಜ್ಯ ಅಭಿವೃದ್ಧಿ ಮತ್ತು ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು ಏರೋಸಿಟಿಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ : 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಹೆಮ್ಮೆಯ ಭಾರತ

ಮನೆ ನಿರ್ಮಾಣಕ್ಕೆ 50 ಸಾವಿರ ಅನುದಾನ :
ಛತ್ತೀಸ್‌ಗಢ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ತಮ್ಮ ಮನೆ ನಿರ್ಮಾಣಕ್ಕಾಗಿ  50 ಸಾವಿರ ರೂಪಾಯಿ ಅನುದಾನ ನೀಡಲಾಗುವುದು  ಎಂದು ಹೇಳಿದ್ದಾರೆ. 

ಹೊಸ ಗ್ರಾಮೀಣ ಉದ್ಯಮ ನೀತಿಯ ಚರ್ಚೆ :
ಗುಡಿ ಕೈಗಾರಿಕೆ ಆಧಾರಿತ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರ ಉದ್ಯೋಗ ಮತ್ತು ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಛತ್ತೀಸ್‌ಗಢದಲ್ಲಿ ಗ್ರಾಮೀಣ ಉದ್ಯಮ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಮಹಿಳಾ ಗುಂಪುಗಳು, ಮಹಿಳಾ ಉದ್ಯಮಿಗಳು ಮತ್ತು ಮಹಿಳಾ ಸ್ಟಾರ್ಟ್‌ಅಪ್‌ಗಳಿಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಸಹಾಯ ಮಾಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು  ಎಂದಿದ್ದಾರೆ. 

ಇದನ್ನೂ ಓದಿ : BA,Bcom,BSc ಪಾಸ್ ಆದವರಿಗೆ ಸರ್ಕಾರದಿಂದ ಪ್ರತೀ ತಿಂಗಳು ಸಿಗಲಿದೆ ರೂ.9 ಸಾವಿರ: ಮಾಡಬೇಕಾಗಿರೋದು ಇಷ್ಟೇ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News