ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರಿನ ದರದಲ್ಲಿ ಇವಿ ಸಿಗುತ್ತೆ: ಸಚಿವ ನಿತಿನ್ ಗಡ್ಕರಿ

ಪಳೆಯುಳಿಕೆ ಇಂಧನ (Fossil fuel) ಅವಲಂಬಿಸುವುದು ದೇಶದ ಆರ್ಥಿಕತೆಯ ದೃಷ್ಟಿಯಿಂದ ಹಾನಿಕಾರಕ. ಭಾರತಕ್ಕೆ ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯು ಆರ್ಥಿಕ ಹೊರೆಯಾಗಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. 

Written by - Puttaraj K Alur | Last Updated : Oct 8, 2025, 09:15 AM IST
  • ಮುಂದಿನ 4-6 ತಿಂಗಳಲ್ಲಿ EV ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ
  • ಶೀಘ್ರದಲ್ಲೇ ಭಾರತದಲ್ಲಿ ಇವಿ ಕ್ರಾಂತಿಯಾಗಲಿದೆ ಎಂದ ಕೇಂದ್ರ ಸಚಿವ ನಿತಿನ್ ಗಡ್ಕರಿ
  • ಪಳೆಯುಳಿಕೆ ಇಂಧನ ಅವಲಂಬಿಸುವುದು ದೇಶದ ಆರ್ಥಿಕತೆಯ ದೃಷ್ಟಿಯಿಂದ ಹಾನಿಕಾರಕ
ಮುಂದಿನ 4-6 ತಿಂಗಳಿನಲ್ಲಿ ಪೆಟ್ರೋಲ್‌ ಕಾರಿನ ದರದಲ್ಲಿ ಇವಿ ಸಿಗುತ್ತೆ: ಸಚಿವ ನಿತಿನ್ ಗಡ್ಕರಿ

Nitin gadkari on EV: ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬೆಲೆ ಪೆಟ್ರೋಲ್-ಡೀಸೆಲ್ ಬೆಲೆಗೆ ಸಮನಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (FICCI) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಭಾರತದಲ್ಲಿ ಇವಿ ಕ್ರಾಂತಿಯಾಗಲಿದೆ ಎಂದು ತಿಳಿಸಿದ್ದಾರೆ.  

Add Zee News as a Preferred Source

ನಾನು ಎಲೆಕ್ಟ್ರಿಕ್ ವಾಹನಗಳನ್ನ ಬಿಡುಗಡೆ ಮಾಡಿದಾಗ ಬ್ಯಾಟರಿ ಬೆಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 150 ಡಾಲರ್‌ ಆಗಿತ್ತು. ಇಂದು ಅದು ಪ್ರತಿ ಕಿಲೋವ್ಯಾಟ್ ಗಂಟೆಗೆ 55 ಡಾಲರ್‌ನಿಂದ 65 ಡಾಲರ್‌ಗೆ ಇಳಿಕೆಯಾಗಿದೆ. ಮುಂಬರುವ ನಾಲ್ಕರಿಂದ ಆರು ತಿಂಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳು, ಎಲೆಕ್ಟ್ರಿಕ್ ಕಾರುಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳು ಪೆಟ್ರೋಲ್-ಡೀಸೆಲ್ ಬೆಲೆಗೆ ಸಮಾನವಾಗುತ್ತವೆ ಎಂದು ನಾನು ಭಾವಿಸುತ್ತೇನೆ ಅಂತಾ ಗಡ್ಕರಿ ಹೇಳಿದ್ದಾರೆ.  ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಒಂದೇ ಬಾರಿಗೆ 1638 ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ಗಿನ್ನೆಸ್ ವಿಶ್ವದಾಖಲೆ ನಿರ್ಮಿಸಿದ ಈ ವ್ಯಕ್ತಿ..!

ಪಳೆಯುಳಿಕೆ ಇಂಧನ (Fossil fuel) ಅವಲಂಬಿಸುವುದು ದೇಶದ ಆರ್ಥಿಕತೆಯ ದೃಷ್ಟಿಯಿಂದ ಹಾನಿಕಾರಕ. ಭಾರತಕ್ಕೆ ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯು ಆರ್ಥಿಕ ಹೊರೆಯಾಗಿದೆ. ಇಂಧನ ಆಮದಿಗೆ ವಾರ್ಷಿಕವಾಗಿ 22 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಎಥೆನಾಲ್, ಸಿಎನ್‌ಜಿ ಅಥವಾ ಐಸೊಬುಟನಾಲ್‌ನಲ್ಲಿ ಚಲಿಸುವ ಎಲೆಕ್ಟ್ರಿಕ್ ಟ್ರಾಕ್ಟರ್‌ಗಳು ಮತ್ತು ಎಂಜಿನ್‌ಗಳನ್ನ ಅಭಿವೃದ್ಧಿಪಡಿಸಲು ಟ್ರಾಕ್ಟರ್ ತಯಾರಕರು ಮತ್ತು ಕೃಷಿ ಸಂಶೋಧಕರಿಗೆ ಸಲಹೆ ನೀಡಿದ್ದೇನೆ ಎಂದು ತಿಳಿಸಿದರು.   

ಈ ನಾವೀನ್ಯತೆಗಳು ಡೀಸೆಲ್ ಆಮದು ಮತ್ತು ಮಾಲಿನ್ಯವನ್ನ ಕಡಿಮೆ ಮಾಡಲು ಮತ್ತು ಗ್ರಾಮೀಣ ಆದಾಯ ಹೆಚ್ಚಿಸಲು ಸಹಾಯ ಮಾಡಲಿದೆ. ನಾನು ಸಾರಿಗೆ ಸಚಿವನಾಗಿ ಅಧಿಕಾರ ವಹಿಸಿಕೊಂಡಾಗ ಭಾರತೀಯ ಆಟೋಮೊಬೈಲ್ ಉದ್ಯಮದ ಗಾತ್ರ 14 ಲಕ್ಷ ಕೋಟಿ ರೂ. ಇತ್ತು. ಈಗ ಭಾರತೀಯ ಆಟೋಮೊಬೈಲ್ ಉದ್ಯಮದ ಗಾತ್ರ 22 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಪ್ರಸ್ತುತ ಅಮೆರಿಕದ ಆಟೋಮೊಬೈಲ್ ಉದ್ಯಮದ ಗಾತ್ರ 78 ಲಕ್ಷ ಕೋಟಿ ರೂ. ಇದ್ದರೆ, ಚೀನಾ 47 ಲಕ್ಷ ಕೋಟಿ ರೂ. ಹೊಂದಿದ್ದು, ಇಡೀ ಪ್ರಪಂಚದಲ್ಲಿಯೇ ಭಾರತ ಮೂರನೇ ಸ್ಥಾನದಲ್ಲಿದೆ. ಶೀಘ್ರದಲ್ಲೇ ಭಾರತಲ್ಲಿ ಇವಿ ಕ್ರಾಂತಿಯಾಗಲಿದೆ. ದೇಶದ ಜನರು ಸಹ ಇವಿಗಳ ಮುಖ ಮಾಡುತ್ತಿದ್ದಾರೆ. 

About the Author

Puttaraj K Alur

ಪುಟ್ಟರಾಜ ಕೆ ಆಲೂರ ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser) ನ್ಯೂಸ್‌, ಒಪೊಯಿ‌ (Opoyi) ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. ...Read More

Trending News