ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಮುಗಿದಿದ್ದು, ನಿನ್ನೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ. 


COMMERCIAL BREAK
SCROLL TO CONTINUE READING

ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ. ಸಮೀಕ್ಷೆಗಳ ಪ್ರಕಾರ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಅದರ ಮಿತ್ರಪಕ್ಷಗಳು  ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ ಮತ್ತು ಮೇಘಾಲಯದಲ್ಲಿ ಎನ್‌ಪಿಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎನ್ನಲಾಗಿದೆ. 


ಇದನ್ನೂ ಓದಿ- Manish Sisodia Arrest: ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧನ: ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಮಹತ್ವದ ಕ್ರಮ


ಎಕ್ಸಿಟ್ ಪೋಲ್ ಪ್ರಕಾರ, ತ್ರಿಪುರಾದಲ್ಲಿ ಬಿಜೆಪಿ 60 ವಿಧಾನಸಭಾ ಸ್ಥಾನಗಳ ಪೈಕಿ 36-45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ತಿಪ್ರಾ ಮೋಥಾ 9-16 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ. ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ 35-43 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಝೀ ನ್ಯೂಸ್-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಹೇಳಿದೆ.


ಇದನ್ನೂ ಓದಿ- ‘ನಾಟು ನಾಟು’ ಹಾಡಿಗೆ ನಾಚುತ್ತಾ ಕುಣಿದ ಕೊರಿಯಾ ರಾಯಭಾರಿ: ಡ್ಯಾನ್ಸ್ ಕಂಡು ಮೋದಿ ಏನಂದ್ರು ಗೊತ್ತಾ?


ಆದರೆ, ಕಾಂಗ್ರೆಸ್ ಕೇವಲ 1-3 ಮತ್ತು ಎನ್‌ಪಿಎಫ್ 2-5 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಎಕ್ಸಿಟ್ ಪೋಲ್ ಹೇಳಿದೆ. ಆದಾಗ್ಯೂ, ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಮೇಘಾಲಯದಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ 21-26 ಸ್ಥಾನಗಳನ್ನು ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.