ಉತ್ತರಪ್ರದೇಶದ ಬದೌನ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ, 8 ಸಾವು

ಉತ್ತರ ಪ್ರದೇಶದ ಬದೌನ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ  ಸಂಭವಿಸಿದ ಸ್ಪೋಟದಿಂದಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Last Updated : Oct 26, 2018, 08:23 PM IST
ಉತ್ತರಪ್ರದೇಶದ ಬದೌನ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ, 8 ಸಾವು  title=
Photo:ANI

ನವದೆಹಲಿ: ಉತ್ತರ ಪ್ರದೇಶದ ಬದೌನ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ  ಸಂಭವಿಸಿದ ಸ್ಪೋಟದಿಂದಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯು ಬದೌನ್ ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪ್ರದೇಶದ ರಸುಲ್ಪುರ್ ಹಳ್ಳಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ.ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯ ಬಳಿಕ ಪೊಲೀಸ ಮತ್ತು ಜಿಲ್ಲಾ ಆಡಳಿತ ಸಿಬ್ಬಂಧಿಯು ಸ್ಥಳಕ್ಕೆ ಧಾವಿಸಿ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಚರಣೆ ಆರಂಭಿಸಿದರು ಎಂದು ಎಎನ್ಐ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಸ್ಪೋಟವು ಶುಕ್ರವಾರ ಸಾಯಂಕಾಲ 4 ಗಂಟೆಗೆ ಸಂಭವಿಸಿದೆ ಎಂದು ವರದಿಯಾಗಿದೆ

ಈ ಘಟನೆಯ ನಿಜವಾದ ಕಾರಣವನ್ನು ಇನ್ನೂ ಖಚಿತಪಡಿಸಬೇಕಾಗಿದೆ.ಇನ್ನು ಕಾರ್ಖಾನೆಗೆ  ಪರವಾನಗಿ ಮಾನ್ಯತೆ ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.

Trending News