ಉತ್ತರಪ್ರದೇಶದ ಬದೌನ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ, 8 ಸಾವು
ಉತ್ತರ ಪ್ರದೇಶದ ಬದೌನ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಿಂದಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ: ಉತ್ತರ ಪ್ರದೇಶದ ಬದೌನ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಿಂದಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆಯು ಬದೌನ್ ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ಪ್ರದೇಶದ ರಸುಲ್ಪುರ್ ಹಳ್ಳಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ.ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಯ ಬಳಿಕ ಪೊಲೀಸ ಮತ್ತು ಜಿಲ್ಲಾ ಆಡಳಿತ ಸಿಬ್ಬಂಧಿಯು ಸ್ಥಳಕ್ಕೆ ಧಾವಿಸಿ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಚರಣೆ ಆರಂಭಿಸಿದರು ಎಂದು ಎಎನ್ಐ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಸ್ಪೋಟವು ಶುಕ್ರವಾರ ಸಾಯಂಕಾಲ 4 ಗಂಟೆಗೆ ಸಂಭವಿಸಿದೆ ಎಂದು ವರದಿಯಾಗಿದೆ
ಈ ಘಟನೆಯ ನಿಜವಾದ ಕಾರಣವನ್ನು ಇನ್ನೂ ಖಚಿತಪಡಿಸಬೇಕಾಗಿದೆ.ಇನ್ನು ಕಾರ್ಖಾನೆಗೆ ಪರವಾನಗಿ ಮಾನ್ಯತೆ ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ.