ಚಂಡೀಗಢ: ಲೂಧಿಯಾನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ (Explosion inside court) ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಸ್ಫೋಟದಲ್ಲಿ ಗೋಡೆಯೂ ಕುಸಿದಿದೆ.  


COMMERCIAL BREAK
SCROLL TO CONTINUE READING

ಸ್ಫೋಟದಲ್ಲಿ ಇಬ್ಬರು ಸಾವು:


ಇತ್ತೀಚಿನ ಮಾಹಿತಿಯ ಪ್ರಕಾರ, ಲೂಧಿಯಾನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ( Blast Inside Ludhiana Court Complex) ನಡೆದ ಈ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. 


ಸ್ಫೋಟ ಸಂಭವಿಸಿದ ತಕ್ಷಣ ನ್ಯಾಯಾಲಯದ (Ludhiana district court complex) ಆವರಣದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಗಾಯಗೊಂಡವರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ.


ಕೆಲವು ದಿನಗಳ ಹಿಂದೆಯಷ್ಟೇ ದೇಶದ ರಾಜಧಾನಿ ದೆಹಲಿಯ ನ್ಯಾಯಾಲಯದಲ್ಲಿ ಸ್ಫೋಟ ನಡೆದಿತ್ತು.  


ಸ್ಫೋಟದ ಹಿಂದೆ ದೇಶವಿರೋಧಿ ಕೈವಾಡ ಎಂದ ಸಿಎಂ ಚನ್ನಿ:


ಈ ಸ್ಫೋಟಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ  ಚರಂಜಿತ್ ಸಿಂಗ್ ಚನ್ನಿ (Chief minister Charanjit Singh Channi) ಹೇಳಿಕೆ ನೀಡಿದ್ದು, ಈ ಸ್ಫೋಟದ ಹಿಂದೆ ದೇಶ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಹೇಳಿದ್ದಾರೆ. ಹತ್ಯಾಕಾಂಡ ಪ್ರಕರಣದ ನಂತರ ಇದೀಗ ಸ್ಫೋಟದ ಮೂಲಕ ಸಂಚು ರೂಪಿಸಲಾಗಿದ್ದು, ಪಂಜಾಬ್ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.


ರಾಜ್ಯದಲ್ಲಿ ಚುನಾವಣೆಗೂ ಮುನ್ನ ರಾಜ್ಯದ ವಾತಾವರಣ ಹಾಳು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಚನ್ನಿ ಹೇಳಿದ್ದಾರೆ. 


ಸ್ಫೋಟದ ನಂತರ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್  ಟ್ವೀಟ್ ಮಾಡಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.


ಇದನ್ನೂ ಓದಿ: ಬೀದಿ ನಾಯಿಗಳ ಪಾಲಿನ ಅನ್ನದಾತೆ.. ಪ್ರತಿದಿನ 800 ಶ್ವಾನಗಳಿಗೆ ಆಹಾರ ನೀಡುವ ಮಂಗಳೂರಿನ ಮಹಿಳೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.