UPSC ನಾಗರಿಕ ಸೇವಾ ಪರೀಕ್ಷೆ ಸ್ಪರ್ಧಿಗಳಿಗೆ ಇಲ್ಲೊಂದು ಸಿಹಿ ಸುದ್ದಿ...!
ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ತಮ್ಮ ಕೊನೆಯ ಪ್ರಯತ್ನವನ್ನು ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗೆ ತಮ್ಮ ಕೊನೆಯ ಪ್ರಯತ್ನವನ್ನು ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
2020 ರ ಅಕ್ಟೋಬರ್‌ನಲ್ಲಿ ನಡೆದ ಪ್ರಾಥಮಿಕ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನವನ್ನು ಹೊಂದಿದ್ದ ಮತ್ತು ಕೊರೊನಾ ಸಾಂಕ್ರಾಮಿಕ ರೋಗದಿಂದ ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ ಪರೀಕ್ಷೆ (UPSC exam) ಯಲ್ಲಿ ಹೆಚ್ಚುವರಿ ಪ್ರಯತ್ನವನ್ನು ಕೋರಿ ನಾಗರಿಕ ಸೇವೆಗಳ ಆಕಾಂಕ್ಷಿ ರಚ್ನಾ ಸಿಂಗ್ ಅವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.
ಇದನ್ನೂ ಓದಿ: UPSC ಪರೀಕ್ಷೆ ದಿನಾಂಕ ಪ್ರಕಟ
ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆಯನ್ನು ಅಕ್ಟೋಬರ್ 4 ರಂದು ನಡೆಸಲಾಯಿತು. ಪರೀಕ್ಷೆಯನ್ನು ಆರಂಭದಲ್ಲಿ ಮೇ ತಿಂಗಳಲ್ಲಿ ನಿಗದಿಪಡಿಸಲಾಗಿತ್ತು, ಆದರೆ COVID-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಬೇಕಾಯಿತು.2020 ರ ಸೆಪ್ಟೆಂಬರ್‌ನಲ್ಲಿ, ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಕೇಂದ್ರ ಸಾರ್ವಜನಿಕ ಸೇವಾ ಆಯೋಗಕ್ಕೆ (ಯುಪಿಎಸ್‌ಸಿ) 2020 ರಲ್ಲಿ ತಮ್ಮ ಕೊನೆಯ ಪ್ರಯತ್ನವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶವನ್ನು ನೀಡುವುದನ್ನು ಪರಿಗಣಿಸುವಂತೆ ಸೂಚಿಸಿತ್ತು.
ಇದನ್ನೂ ಓದಿ: Fact-Check: ಸ್ಪೀಕರ್ ಓಂ ಬಿರ್ಲಾ ಪುತ್ರಿ ಯುಪಿಎಸ್ಸಿ ಪರೀಕ್ಷೆ ಎದುರಿಸದೇ ಉತ್ತೀರ್ಣರಾದ್ರಾ?
ಕೊನೆಯ ಅವಕಾಶ ಅಭ್ಯರ್ಥಿಗಳಿಗೆ ಹೆಚ್ಚುವರಿ ಪ್ರಯತ್ನವನ್ನು ನೀಡುವ ವಿಷಯವು ಅಧಿಕಾರಿಗಳ ಪರಿಗಣನೆಯಲ್ಲಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಕ್ಟೋಬರ್ 26 ರಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಆದಾಗ್ಯೂ, ಜನವರಿ 22 ರಂದು, ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗೆ ಅಗತ್ಯವಾದ ಒಟ್ಟಾರೆ ಕಾರ್ಯವೈಖರಿಗೆ ಹಾನಿಕಾರಕವಾದ "ಕ್ಯಾಸ್ಕೇಡಿಂಗ್" ಪರಿಣಾಮವನ್ನು ಸೃಷ್ಟಿಸುತ್ತದೆ ಎಂದು ಉಲ್ಲೇಖಿಸಿ ಆ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶವನ್ನು ನೀಡುವ ಪರ ಇಲ್ಲ ಎಂದು ಕೇಂದ್ರ ಹೇಳಿತ್ತು.
ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಲೋಕಾರ್ಪಣೆಗೊಂಡ ಸರ್ದಾರ್ ವಲ್ಲಭಭಾಯಿ ಅಕಾಡೆಮಿ...!
ಕೇಂದ್ರವು ಹಂಚಿಕೊಂಡ ಮಾಹಿತಿಯ ಪ್ರಕಾರ ಅಕ್ಟೋಬರ್ 4 ರಂದು ಒಟ್ಟು 4,86,952 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.ಏತನ್ಮಧ್ಯೆ, ನಾಗರಿಕ ಸೇವಾ 2020 ರ ಮುಖ್ಯ ಪರೀಕ್ಷೆ ಮುಗಿದಿದೆ. ಜನವರಿ 8-17 ರಿಂದ ಪರೀಕ್ಷೆ ನಡೆಯಿತು. ಪೂರ್ವಭಾವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮುಖ್ಯ ಪರೀಕ್ಷೆಗೆ 10,000 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ನಾಗರಿಕ ಸೇವೆಗಳ ಪರೀಕ್ಷೆ 2021 ರ ಅಧಿಸೂಚನೆಯನ್ನು ಫೆಬ್ರವರಿ 10 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.