ಚೆನ್ನೈ: ಖ್ಯಾತ ಅರ್ಥಶಾಸ್ತ್ರಜ್ಞ, ಪದ್ಮ ಭೂಷಣ ಪ್ರಶಸ್ತಿ ವಿಜೇತ ಪ್ರೊ.ಟಿ.ಎನ್. ಶ್ರೀನಿವಾಸನ್ ಶನಿವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ.


COMMERCIAL BREAK
SCROLL TO CONTINUE READING

ಮಾರ್ಚ್ 1933ರಲ್ಲಿ ಜನಿಸಿದ ಶ್ರೀನಿವಾಸನ್ ಕೋಲ್ಕತಾದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ನಲ್ಲಿ ಸ್ಟಾಟಿಸ್ಟಿಕ್ಸ್ ವಿಷಯದಲ್ಲಿ ಬಿಎ, ಎಂಎ ಪದವಿ ಪಡೆದಿದ್ದರು. 1977ರಲ್ಲಿ ವಿಶ್ವ ಬ್ಯಾಂಕ್ ಅಭಿವೃದ್ಧಿ ಸಂಶೋಧನಾ ಕೇಂದ್ರದ ವಿಶೇಷ ಸಲಹೆಗಾರರಾಗಿದ್ದ ಶ್ರೀನಿವಾಸನ್  ಕಳೆದ ನಾಲ್ಕು ದಶಕಗಳಲ್ಲಿ ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 


ಅಷ್ಟೇ ಅಲ್ಲದೆ, 1991ರಲ್ಲಿ ಆರ್ಥಿಕ ಸುಧಾರಣಾ ಪರ್ವದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶ್ರೀನಿವಾಸನ್ ಅವರು, ವ್ಯಾಪಾರ ವ್ಯವಹಾರಗಳ ಮೇಲೆ ನಿಯಂತ್ರಣಕ್ಕೆ ಸರ್ಕಾರದ ಕ್ರಮ ಮತ್ತು ಪಾತ್ರದ ಬಗ್ಗೆ ಅವರು ತಮ್ಮ ಅಧ್ಯಯನಗಳಲ್ಲಿ ಪ್ರತಿಪಾದನೆ ಮಾಡಿದ್ದರು. ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಭಾರತಸರ್ಕಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 


ಶ್ರೀನಿವಾಸನ್ ನಿಧನಕ್ಕೆ ಕೇಂದ್ರದ ಆರ್ಥಿಕ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್, ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.