ನವದೆಹಲಿ: ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಐದನೇ ಸುತ್ತಿನ ಮಾತುಕತೆ ವಿಫಲವಾಗಿದೆ, ರೈತರು ನೂತನ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವ ವಿಚಾರವಾಗಿ ಹೌದು ಅಥವಾ ಇಲ್ಲ ಎನ್ನುವ ಉತ್ತರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪಟ್ಟು ಹಿಡಿದ ಬೆನ್ನಲ್ಲೇ ಮಾತುಕತೆ ಪ್ರಯತ್ನ ಮತ್ತೆ ವಿಫಲವಾಗಿದೆ.


COMMERCIAL BREAK
SCROLL TO CONTINUE READING

ದೆಹಲಿ ಗಡಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ


ಸರ್ಕಾರ ಮತ್ತು ರೈತ ಸಂಘಗಳ ನಡುವಿನ ಐದನೇ ಸುತ್ತಿನ ಮಾತುಕತೆ ಕೊನೆಗೊಂಡಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ. ಕೇಂದ್ರವು ಡಿಸೆಂಬರ್ 9 ರಂದು ಮತ್ತೊಂದು ಸಭೆಯನ್ನು ಪ್ರಸ್ತಾಪಿಸಿದೆ ಮತ್ತು ಹೆಚ್ಚಿನ ಸಮಾಲೋಚನೆಗಳ ನಂತರ ಕಿಸಾನ್ ಒಕ್ಕೂಟಗಳಿಂದ ಸ್ಪಷ್ಟವಾದ ಪ್ರಸ್ತಾಪವನ್ನು ಮಂಡಿಸಲು ಸಮಯವನ್ನು ಕೋರಿದೆ ಎಂದು ವರದಿಗಳು ತಿಳಿಸಿವೆ.


ಇಂದು ರೈತರು- ಕೇಂದ್ರ ‌ಸರ್ಕಾರದ 5ನೇ ಸಭೆ, ಇಂದಾದರೂ ಬಗೆಹರಿಯುತ್ತಾ ರೈತರ ಸಮಸ್ಯೆ?


ಈ ಹಿನ್ನಲೆಯಲ್ಲಿ ಈಗ ಮುಂದಿನ ಸಭೆಯನ್ನು ಡಿಸೆಂಬರ್ 9ಕ್ಕೆ ಏರ್ಪಡಿಸಲಾಗಿದೆ.ಅದಕ್ಕೂ ಮೊದಲು ರೈತರು ಡಿಸೆಂಬರ್ 8 ರಂದು ದೇಶವ್ಯಾಪಿ ಬಂದ್ ಕರೆ ನೀಡಿರುವುದಲ್ಲದೆ ದೆಹಲಿಯಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದ್ದಾರೆ ಎನ್ನಲಾಗಿದೆ.ಪ್ರತಿಭಟನಾ ನಿರತ ರೈತರ ಎಲ್ಲಾ ಕಳವಳಗಳನ್ನು ಮುಕ್ತ ಮನಸ್ಸಿನಿಂದ ಪರಿಹರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ.ಆಂದೋಲನ ನಡೆಸುತ್ತಿರುವ ರೈತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರವು ಒಪ್ಪಿಗೆ ನೀಡಿದೆ ಮತ್ತು 2020 ರ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ಹಿಂತೆಗೆದುಕೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.


ಡಿಸೆಂಬರ್ 08 ಕ್ಕೆ ದೇಶವ್ಯಾಪಿ ಬಂದ್ ಕರೆ ನೀಡಿದ ರೈತರು


ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ಸಚಿವ ಸೋಮ್ ಪ್ರಕಾಶ್ ಅವರು 40 ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆಯ ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ವಿರುದ್ಧ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.