Bharat Bandh: ಫೆಬ್ರವರಿ 16ಕ್ಕೆ ಭಾರತ್​ ಬಂದ್..?

Bharat Bandh on February 16: ʼಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ. ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಟಿಕಾಯತ್ ಹೇಳಿದ್ದಾರೆ.

Written by - Puttaraj K Alur | Last Updated : Jan 24, 2024, 08:26 PM IST
  • ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
  • ಫೆಬ್ರುವರಿ 16ರಂದು ʼಭಾರತ್ ಬಂದ್ʼ ನಡೆಸಲು ರೈತ ಸಂಘಟನೆಗಳ ನಿರ್ಧಾರ
  • ಭಾರತ್‌ ಬಂದ್‌ ಪ್ರತಿಭಟನೆಗೆ ಕೈಜೋಡಿಸುವಂತೆ ರಾಕೇಶ್‌ ಟಿಕಾಯತ್‌ ಮನವಿ
Bharat Bandh: ಫೆಬ್ರವರಿ 16ಕ್ಕೆ ಭಾರತ್​ ಬಂದ್..?	 title=
ಫೆಬ್ರವರಿ 16ಕ್ಕೆ ಭಾರತ್​ ಬಂದ್?

ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಫೆಬ್ರುವರಿ 16ರಂದು ʼಭಾರತ್ ಬಂದ್ʼ ನಡೆಸಲು ನಿರ್ಧರಿಸಿವೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ರೈತ ಸಂಘಟನೆಗಳ ಈ ಹೋರಾಟಕ್ಕೆ ಬೆಂಬಲ ನೀಡಿ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸುವಂತೆ ವ್ಯಾಪಾರಿಗಳು ಮತ್ತು ಸಾರಿಗೆ ಸಿಬ್ಬಂದಿಗೆ ಭಾರತೀಯ ಕಿಸಾನ್ ಯೂನಿಯನ್‌ನ(BKU) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಂದಿನಿಂದ 48 ದಿನ ಬ್ರಹ್ಮಕಲಶಾಭಿಷೇಕೋತ್ಸವ; ರಾಮಮಂದಿರದಿಂದ ಆರ್ಥಿಕತೆಗೆ ಎಷ್ಟು ಲಾಭ ಗೊತ್ತಾ?

ಮುಜಾಫರ್‌ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ʼಫೆಬ್ರುವರಿ 16ರಂದು ನಾವು ʼಭಾರತ್ ಬಂದ್‌ʼಗೆ ಕರೆ ನೀಡಿದ್ದೇವೆ. ಸಂಯುಕ್ತ ಕಿಸಾನ್ ಮೋರ್ಚಾ(SKM) ಸೇರಿದಂತೆ ಹಲವು ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಆ ದಿನ ರೈತರು ಜಮೀನುಗಳಿಗೆ ತೆರಳದೆ ಬಂದ್ ಆಚರಿಸಿ. ಈ ಮೂಲಕ ದೇಶಕ್ಕೆ ದೊಡ್ಡ ಸಂದೇಶ ರವಾನಿಸಬೇಕಾಗಿದೆ. ವ್ಯಾಪಾರಿಗಳು ಕೂಡ ಆ ದಿನ ತಮ್ಮ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಬೇಕು. ಗ್ರಾಹಕರು ಸಹ ಅಂದು ವ್ಯಾಪಾರ ಮಾಡುವುದನ್ನು ನಿಲ್ಲಿಸಬೇಕುʼ ಎಂದು ಮನವಿ ಮಾಡಿದ್ದಾರೆ.

ʼಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ. ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ದೊಡ್ಡ ಸಮಸ್ಯೆಯಾಗಿದ್ದು, ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ತಿರುಪತಿ ಭಕ್ತರ ಗಮನಕ್ಕೆ : ರೂ. 300 ವಿಶೇಷ ದರ್ಶನ ಆನ್‌ಲೈನ್‌ ಟಿಕೆಟ್‌ ಬಿಡುಗಡೆ 

ಇದು ಕೇವಲ ರೈತ ಸಂಘಟನೆಗಳ ಹೋರಾಟವಲ್ಲ. ಇತರೆ ಸಂಘಟನೆಗಳು ಸಹ ಇದರಲ್ಲಿ ಕೈಜೋಡಿಸಲಿವೆ. ರಸ್ತೆ ಅಪಘಾತಗಳಲ್ಲಿ ಸಿಲುಕುವ ವಾಹನಗಳ ಚಾಲಕರ ವಿರುದ್ಧದ ಹೊಸ ಕಠಿಣ ಕಾನೂನು ವಿರೋಧಿಸಿ ಇತ್ತೀಚೆಗೆ ಪ್ರತಿಭಟಿಸಿದ ಸಾರಿಗೆ ಸಮುದಾಯವು ಸಹ ಫೆಬ್ರವರಿ 16ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ಅವರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News