ನವದೆಹಲಿ: ದೇಶಾದ್ಯಂತ ರೈತರ ಸಾಲಮನ್ನಾ ಬಗ್ಗೆ ಮಾತನಾಡಲಾಗುತ್ತಿದೆ. ಈ ಹೊಸವರ್ಷದಲ್ಲಿ ರೈತರಿಗೆ ದೊಡ್ಡ ಉಡುಗೊರೆ ಸಿಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಈ ಹೊಸ ವರ್ಷದ ಆರಂಭದಲ್ಲಿ ರೈತರ ಸಾಲಮನ್ನಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೊಡ್ಡ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೇ ಎನ್ನಲಾಗಿದೆ.  ವಾಸ್ತವವಾಗಿ, ಪ್ರಧಾನಿ ನಿನ್ನೆ ಸಂಜೆ ಕೃಷಿ ಸಚಿವಾಲಯದ ಅಧಿಕಾರಿಗಳೊಂದಿಗೆ ಪ್ರಮುಖ ಸಭೆ ನಡೆಸಿದ್ದರು.


COMMERCIAL BREAK
SCROLL TO CONTINUE READING

ಇದಕ್ಕೂ ಮೊದಲು ಹಲವು ಬಾರಿ ರೈತರ ಸಾಲಮನ್ನಾ ಬಗ್ಗೆ ಸಭೆ ಸಮಾಲೋಚನೆ ನಡೆದಿದೆ. ರೈತರ ಸಾಲದ ಮನ್ನಾ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ನಿನ್ನೆ ಸಂಜೆ 6:30 ರಿಂದ ರಾತ್ರಿ 9 ಗಂಟೆವರೆಗೆ ಈ ಬಗ್ಗೆ ಮಹತ್ವದ ಸಭೆ ನಡೆಸಿದ್ದಾರೆ. 



ಪ್ರಧಾನಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ರೈತರ ಸಾಲಮನ್ನಾ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ರೈತರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗುವ ನಿರೀಕ್ಷೆಯಿದೆ ಎನ್ನಲಾಗಿದೆ.