ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಕೇಂದ್ರ ಸರ್ಕಾರವು ರೈತರ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಗುರುವಾರ ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ತಮ್ಮ ವರ್ಷಾವಧಿಯ ಆಂದೋಲನವನ್ನು ಕೊನೆಗೊಳಿಸಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರದಂದು (ಡಿಸೆಂಬರ್ 9) ಘೋಷಿಸಿತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Samantha in Pushpa:'ಪುಷ್ಪ' ಐಟಮ್​ ಸಾಂಗ್​ನಲ್ಲಿ ಸಮಂತಾ ಲುಕ್ ನೋಡಿ ಬೆರಗಾದ ಅಭಿಮಾನಿಗಳು


ಸಂಯುಕ್ತ ಕಿಸಾನ್ ಮೋರ್ಚಾ ಸಿಂಘು ಗಡಿಯಿಂದ ಇದನ್ನು ಘೋಷಿಸಿತು.ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ 15 ರಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ.


'ನಾವು ನಮ್ಮ ಮನೆಗಳಿಗೆ ಹೊರಡಲು ತಯಾರಿ ನಡೆಸುತ್ತಿದ್ದೇವೆ,ಆದರೆ ಅಂತಿಮ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ತೆಗೆದುಕೊಳ್ಳುತ್ತದೆ' ಎಂದು ರೈತರೊಬ್ಬರು ಹೇಳಿದರು.ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ರೈತ ಸಂಘದ ಒಕ್ಕೂಟವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಭವಿಷ್ಯದ ಕ್ರಮವನ್ನು ರೂಪಿಸಲು ಸಭೆ ಸೇರಿತ್ತು.


ಇದನ್ನೂ ಓದಿ : OMG: ಈ ಸ್ವೆಟರ್ ಬೆಲೆ 30 ಲಕ್ಷ ರೂಪಾಯಿಯಂತೆ, ಅಂಥದ್ದೇನಿದೆ ಇದರಲ್ಲಿ?


ಕಾನೂನು ಹಿಂಪಡೆದ ನಂತರ, ಕೇಂದ್ರವು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು ಅದನ್ನು ರೈತರು ಒಪ್ಪಿಕೊಂಡಿದ್ದಾರೆ.ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತವಾಗಿ ಹೊರತಂದಿದೆ.ಈ ನಡುವೆ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಟೆಂಟ್‌ ತೆಗೆಯಲು ಆರಂಭಿಸಿದ್ದಾರೆ. ಇದೆ ವೇಳೆ ಅವರು ಸಿಹಿ ವಿನಿಮಯ ಮಾಡಿಕೊಳ್ಳುವುದೂ ಕಂಡು ಬಂತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.