ನವದೆಹಲಿ: ಕಳೆದ ಐದು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಈ ಸಂದರ್ಭದಲ್ಲಿ ದೇಶದ ರೈತರ ಪ್ರಸ್ತುತ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವನ್ನು ಅವರು ದೂಷಿಸಿದರು.


COMMERCIAL BREAK
SCROLL TO CONTINUE READING

ವಾಸ್ತವವಾಗಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರೈತರ 'ಬವಣೆ' ಬಗ್ಗೆ ಕೇಂದ್ರ ಸರ್ಕಾರವನ್ನು ದೂಷಿಸಿದರು. ರಾಹುಲ್ ಗಾಂಧಿಯವರ ಆರೋಪಗಳನ್ನು ನಿರಾಕರಿಸಿದ ರಾಜನಾಥ್ ಸಿಂಗ್, "ಹಿಂದಿನ ಸರ್ಕಾರಗಳಲ್ಲಿ ಹೆಚ್ಚು ರೈತರ ಆತ್ಮಹತ್ಯೆಗಳು ನಡೆದಿವೆ." ಕಳೆದ ಐದು ವರ್ಷಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದಿದ್ದಾರೆ.


"ರೈತರ ಇಂದಿನ ಪರಿಸ್ಥಿತಿಗೆ ಇದು ಕೇವಲ ನಾಲ್ಕೈದು ವರ್ಷಗಳು ಅಧಿಕಾರ ನಡೆಸಿರುವ ಬಿಜೆಪಿ ಸರ್ಕಾರ ಕಾರಣವಲ್ಲ. ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿದ್ದ ಸರ್ಕಾರ ರೈತರ ಇಂದಿನ ಈ ದುಸ್ಥಿತಿಗೆ ಕಾರಣ ಎಂದು ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜನಾಥ್ ಸಿಂಗ್ ವಾಗ್ಧಾಳಿ ನಡೆಸಿದ್ದಾರೆ.


ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಆದಾಯವನ್ನು ದ್ವಿಗುಣಗೊಳಿಸಲು ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ನರೇಂದ್ರ ಮೋದಿ ಪ್ರಧಾನಿಯಾದ ನಂತರ ರೈತರ ಸ್ಥಿತಿ  ಸುಧಾರಿಸಿದೆ ಎಂದು ಶೂನ್ಯ ವೇಳೆಯಲ್ಲಿ ಸಿಂಗ್ ತಿಳಿಸಿದರು.


"ಈ ಸರ್ಕಾರವು ಹೆಚ್ಚಿಸಿದ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯನ್ನು ಸ್ವತಂತ್ರ ಭಾರತದ ಇತಿಹಾಸದಲ್ಲಿ ಹಿಂದಿನ ಯಾವುದೇ ಸರ್ಕಾರಗಳು ಹೆಚ್ಚಿಸಿಲ್ಲ ಎಂದು ನಾನು ದೃಢವಾಗಿ ಹೇಳುತ್ತೇನೆ" ಎಂದು ಅವರು ಹೇಳಿದರು.


ವರದಿಯ ಪ್ರಕಾರ ಮೋದಿ ರಾಜ್‌ನಲ್ಲಿ ರೈತರ ಆದಾಯವು ಶೇಕಡಾ 20-25 ರಷ್ಟು ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ ರಾಜನಾಥ್ ಸಿಂಗ್, "ರೈತರ ಕಲ್ಯಾಣಕ್ಕಾಗಿ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬದ್ಧರಾಗಿದ್ದೇವೆ. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ" ಎಂದು ಹೇಳಿದರು.