ಆಂಬುಲೆನ್ಸ್ ಸಿಗದೆ ಮಗುವಿನ ಮೃತದೇಹವನ್ನು ಹೆಗಲ ಮೇಲೆ ಹೊತ್ತೊಯ್ದ ತಂದೆ

ನಳಂದಾ ಜಿಲ್ಲಾಧಿಕಾರಿ (ಡಿಎಂ) ಯೋಗೇಂದ್ರ ಸಿಂಗ್ ಇದು ಗಂಭೀರ ವಿಷಯವಾಗಿದೆ ಎಂದು ತಿಳಿಸಿದ್ದು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

Last Updated : Jun 26, 2019, 03:28 PM IST
ಆಂಬುಲೆನ್ಸ್ ಸಿಗದೆ ಮಗುವಿನ ಮೃತದೇಹವನ್ನು ಹೆಗಲ ಮೇಲೆ ಹೊತ್ತೊಯ್ದ ತಂದೆ  title=

ನಳಂದಾ: ಆಂಬುಲೆನ್ಸ್ ಸಿಗದೆ ವ್ಯಕ್ತಿಯೊಬ್ಬರು 8 ವರ್ಷದ ಮಗನ ಮೃತ ದೇಹವನ್ನು ಹೆಗಲ ಮೇಲೆ ಹೊತ್ತೊಯ್ದ ಘಟನೆ ಬಿಹಾರದ ನಳಂದಾ ಜಿಲ್ಲೆಯಲ್ಲಿ ನಡೆದಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆಯ ಸದರ್ ಆಸ್ಪತ್ರೆಯಲ್ಲಿ ಆಡಳಿತಾಧಿಕಾರಿಗಳ ನಿರ್ಲಕ್ಷ್ಯ ಈ ಘಟನೆಗೆ ಕನ್ನಡಿ ಹಿಡಿದಂತಿದೆ. ಆದಾಗ್ಯೂ, ಮಗು ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ (ಎಇಎಸ್) ನಿಂದ ಬಳಲುತ್ತಿದೆ ಎಂದು ಸೂಚಿಸುವ ಯಾವುದೇ ವರದಿಗಳಿಲ್ಲ.

ಮೃತ ದೇಹಗಳನ್ನು ಸಾಗಿಸಲು ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ ಸದರ್ ಆಸ್ಪತ್ರೆಗೆ  ವಾಹನಗಳನ್ನು ಒದಗಿಸಲಾಗಿದೆ. ಆಸ್ಪತ್ರೆಯಲ್ಲಿ ಮರಣಹೊಂದಿದ ಯಾವುದೇ ವ್ಯಕ್ತಿಯ ದೇಹವನ್ನು ಸಾಗಿಸಲು ಕುಟುಂಬದವರೊಂದಿಗೆ ಮಾತನಾಡಿ, ವಾಹನವನ್ನು ಒದಗಿಸುವುದು ನಿಯೋಜಿತ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ, ಮೃತ ಮಗುವಿನ ತಂದೆ ಸತ್ತ ಮಗನನ್ನು ಭುಜದ ಮೇಲೆ ಹೊತ್ತು ಸಹಾಯಕ್ಕಾಗಿ ಆಸ್ಪತ್ರೆಯ ಆವರಣದೊಳಗೆ ಪರದಾಡಿದರೂ, ಆಸ್ಪತ್ರೆಯ ಯಾವುದೇ ಸಿಬ್ಬಂದಿ ಆತನ ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ಇದರಿಂದ ದಣಿದ ತಂದೆ ಯಾರೊಂದಿಗೂ ಒಂದು ಮಾತನ್ನೂ ಹೇಳದೆ ಮಗುವನ್ನು ಹೊತ್ತುಕೊಂಡು ಆಸ್ಪತ್ರೆಯಿಂದ ಹೊರಟಿದ್ದಾರೆ.

ಮೃತ ಸಾಗರ್ ಕುಮಾರ್(8) ಪರ್ಬಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸೀತಾ ಬಿಘಾ ನಿವಾಸಿಯಾಗಿದ್ದು, ಬೆಳಿಗ್ಗೆ ಸೈಕ್ಲಿಂಗ್ ಮುಗಿಸಿ ಮನೆಗೆ ಬಂದೊಡನೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣ ಆತನನ್ನು ಸಮೀಪದ ಕ್ಲಿನಿಕ್ ಗೆ ಕರೆದೊಯ್ಯಲಾಗಿದೆ. ವೈದ್ಯರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ ಹಿನ್ನೆಲೆಯಲ್ಲಿ ಅಲ್ಲಿಂದ ಆತನನ್ನು ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಮಗ ಸತ್ತಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎನ್ನಲಾಗಿದೆ.

ನಳಂದಾ ಜಿಲ್ಲಾಧಿಕಾರಿ (ಡಿಎಂ) ಯೋಗೇಂದ್ರ ಸಿಂಗ್ ಇದು ಗಂಭೀರ ವಿಷಯವಾಗಿದೆ ಎಂದು ತಿಳಿಸಿದ್ದು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಕುಟುಂಬಕ್ಕೆ ವಾಹನದ ಭರವಸೆ ನೀಡಲಾಯಿತು. ಆದರೆ ಆ ಸಮಯದಲ್ಲಿ ಆಂಬುಲೆನ್ಸ್ ಲಭ್ಯವಿಲ್ಲದ ಕಾರಣ ಕುಟುಂಬವನ್ನು ಕಾಯುವಂತೆ ಹೇಳಿದ್ದೆವು. ಆದಾಗ್ಯೂ, ಅವರು ಮೃತ ದೇಹವನ್ನು ಹೊತ್ತು ಹೊರಟುಹೋದರು ಎಂದಿದ್ದಾರೆ.

ಮಗುವನ್ನು ಆಸ್ಪತ್ರೆಗೆ ಕರೆತರುವ ಮೊದಲೇ ಮಗು ಸಾವನ್ನಪ್ಪಿದ್ದು, ಕುಟುಂಬದವರು ಆತುರದಿಂದ ಮಗುವಿನ ಶವವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆಸ್ಪತ್ರೆ ಅಧೀಕ್ಷಕ ಡಾ.ರಾಮ್ ಕುಮಾರ್ ಹೇಳಿದ್ದಾರೆ.
 

Trending News