Uttar Pradesh: ಮನೆಯ ಮೇಲೆ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್..!

ಪಾಕಿಸ್ತಾನದ ಧ‍್ವಜ ಹಾರಿಸಿದ ಆರೋಪದಡಿ ಪೊಲೀಸರು ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್‌ ಎಂಬಾತನನ್ನು ಬಂಧಿಸಿದ್ದಾರೆ. ಮನೆಯ ಮೇಲೆ ಧ್ವಜ ಹಾರಿಸಿದ್ಯಾಕೆ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Written by - Puttaraj K Alur | Last Updated : Sep 29, 2023, 07:11 PM IST
  • ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ತಂದೆ-ಮಗನ ಬಂಧನ
  • ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿರುವ ಘಟನೆ
  • ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವಿಡಿಯೋ
Uttar Pradesh: ಮನೆಯ ಮೇಲೆ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್..! title=
ಪಾಕ್ ಧ್ವಜ ಹಾರಿಸಿದ ತಂದೆ-ಮಗನ ಬಂಧನ!

ಉತ್ತರ ಪ್ರದೇಶ: ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ತಂದೆ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಘಟನೆ ನಡೆದಿದೆ.

ಮೊರಾದಾಬಾದ್‌ನಲ್ಲಿ ಮನೆಯ ಮೇಲೆ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿತ್ತು. ಈ ವಿಷಯವಾಗಿ ಕೋಲಾಹಲ ಉಂಟಾಗಿತ್ತು. ಈ ಬಗ್ಗೆ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪಾಕ್ ಧ್ವಜವನ್ನು ತೆಗೆಸಿದ್ದರು.   

ಇದನ್ನೂ ಓದಿ: MS Swaminathan: ಭಾರತದ ‘ಹಸಿರು ಕ್ರಾಂತಿ’ಯ ಪಿತಾಮಹ ಎಂ.ಎಸ್.ಸ್ವಾಮಿನಾಥನ್ ವಿಧಿವಶ

ಪಾಕಿಸ್ತಾನದ ಧ‍್ವಜ ಹಾರಿಸಿದ ಆರೋಪದಡಿ ಪೊಲೀಸರು ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್‌ ಎಂಬಾತನನ್ನು ಬಂಧಿಸಿದ್ದಾರೆ. ಮನೆಯ ಮೇಲೆ ಧ್ವಜ ಹಾರಿಸಿದ್ಯಾಕೆ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬಂಧಿತ ರಯೀಸ್ ಬಟ್ಟೆ ಅಂಗಡಿ ಇಟ್ಟಿದ್ದು, ಆತನೇ ಪಾಕಿಸ್ತಾನದ ಧ್ವಜವನ್ನು ತಯಾರಿಸಿದ್ದನಂತೆ. ಆರೋಪಿಗಳು ಮನೆಯ ಮೇಲೆ ಪಾಕ್ ಧ್ವಜ ಹಾರಿಸಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.

ಇದನ್ನೂ ಓದಿ: Watch: ಈಶ್ಯಾನ್ಯ ರಾಜ್ಯದ ಮಹಿಳೆಯ ಮೇಲೆ ಸ್ಪಾ ಸೆಂಟರ್ ಮಾಲೀಕನ ಹಲ್ಲೆ 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News