ಬೆಂಗಳೂರು: ರಸಗೊಬ್ಬರಗಳ ಬೆಲೆ ಏರಿಕೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ರಸಗೊಬ್ಬರಗಳ ಬೆಲೆ ಹೆಚ್ಚಾಗಿದೆ, ಇದು ಈಗ ದೇಶೀಯ ಮಾರುಕಟ್ಟೆಯಲ್ಲಿ ಪ್ರತಿಫಲಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಈ ಕುರಿತು ಸುದ್ದಿಗಾರ ಜೊತೆ ಮಾತನಾಡಿದ  ಸಚಿವ ಡಿವಿ ಸದಾನಂದ ಗೌಡ(DV Sadananda Gowda), ಗೊಬ್ಬರ ಉತ್ಪಾದನಾ ಕಂಪನಿಗಳಿಗೆ ಗೊಡೌನ್‌ನಲ್ಲಿ ಲಭ್ಯವಿರುವ ಸ್ಟಾಕ್ ಮಾಲ್ ಅನ್ನು ಹಳೆಯ ಬೆಲೆಗೆ ಮಾರಾಟ ಮಾಡಲು ನಿರ್ದೇಶಿಸಲಾಗಿದೆ. ಸ್ಟಾಕ್ ಗೊಬ್ಬರವು ಮುಂದಿನ 45 ದಿನಗಳವರೆಗೆ ಮಾರುಕಟ್ಟೆಯಲ್ಲಿ ರೈತರಿಗೆ ಲಭ್ಯವಿರಲಿದೆ. 


ಇದನ್ನೂ ಓದಿ :ಜುಲೈ 8 ಕ್ಕೆ ರಾಜಕೀಯ ಪಕ್ಷಕ್ಕೆ ಚಾಲನೆ ನೀಡಲಿರುವ ಜಗನ್ಮೋಹನ್ ರೆಡ್ಡಿ ಸಹೋದರಿ


ರಸಗೊಬ್ಬರಗಳನ್ನು ರೈತ(Farmers)ರಿಗೆ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ರಸಗೊಬ್ಬರಗಳನ್ನು ಖರೀದಿಸಲು ರೈತರಿಗೆ ನೀಡುವ ಸಬ್ಸಿಡಿಗಳನ್ನು ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಿಎಪಿ ಮತ್ತು ಎನ್‌ಪಿಕೆ ರಸಗೊಬ್ಬರಗಳ ಬೆಲೆ ಎರಡು ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : 7th Pay Commission Latest Update: DA ಹೆಚ್ಚಳ, DR ಪ್ರಯೋಜನಗಳ ಕುರಿತು ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!


“ಭಾರತವು ಶೇ. 90 ರಷ್ಟು ರಸಗೊಬ್ಬರ(Fertiliser)ಗಳಿಗೆ ವಿದೇಶಗಳ ಮೇಲೆ ಅವಲಂಬಿತವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆ ದೇಶೀಯ ಮಾರುಕಟ್ಟೆಯಲ್ಲಿ ಪರಿಣಾಮ ಬೀರುತ್ತದೆ. ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ”ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಭಾರತ ಸರ್ಕಾರದಿಂದ ನಿಜವಾಗಿಯೂ ಸಿಗುತ್ತಿದೆಯೇ 3 ತಿಂಗಳ FREE Internet? ಇಲ್ಲಿದೆ ಸತ್ಯಾಸತ್ಯತೆ


"ಯೂರಿಯಾ(Urea)ದ ಬೆಲೆ ಶೇ.17  ರಷ್ಟು ಹೆಚ್ಚಾಗಿದೆ ಮತ್ತು ಇತರ ರಸಗೊಬ್ಬರಗಳ ಬೆಲೆ ಶೇ. 40 ರಷ್ಟು  ಹೆಚ್ಚಾಗಿದೆ. ನಾನು ರಸಗೊಬ್ಬರ ಘಟಕದ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದೇನೆ ಮತ್ತು ಅಸ್ತಿತ್ವದಲ್ಲಿರುವ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಿಸದಂತೆ ಅವರಿಗೆ ನಿರ್ದೇಶನ ನೀಡಿದ್ದೇನೆ ”ಎಂದು ಅವರು ಹೇಳಿದ್ದಾರೆ. ಶೀಘ್ರದಲ್ಲೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆಗಳು ಕಡಿಮೆಯಾಗುತ್ತವೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.