ರಾಂಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಜೆಪಿ ಅಭ್ಯರ್ಥಿ ನಟಿ ಜಯಪ್ರದಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ಉತ್ತರಪ್ರದೇಶದ ರಾಂಪುರದ ಶಾಹಾಬಾದ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಶಾಹಬಾದ್ ಮ್ಯಾಜಿಸ್ಟ್ರೇಟ್ ಮಹೇಶ್ ಕುಮಾರ್ ಗುಪ್ತಾ ಅವರ ದೂರಿನ ಕುರಿತು ಈ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.



ಉತ್ತರಪ್ರದೇಶದ ರಾಂಪುರದಲ್ಲಿ ಭಾನುವಾರ ಸಮಾಜವಾದಿ ಪಕ್ಷ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ರ್ಯಾಲಿ ವೇಳೆ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಮ್ಮುಖದಲ್ಲೇ "ಜಯಪ್ರದಾ ಅವರನ್ನು ರಾಜಕೀಯಕ್ಕೆ ಕರೆತಂದಿದ್ದೇ ನಾನು. ಇದೇ ರಾಂಪುರದಿಂದ ಆಕೆಗೆ ಟಿಕೆಟ್ ಕೊಡಿಸಿದ್ದೆ. ಆಕೆಯ ಬಾಡಿಗಾರ್ಡ್ ನಂತೆ ಆಕೆಯನ್ನು ಯಾರೂ ಕೂಡ ಸ್ಪರ್ಶಿಸದಂತೆ ನೋಡಿಕೊಂಡೆ. ಆದರೆ ಆಕೆಯ ನಿಜವಾದ ಮುಖವನ್ನು ಅರಿಯಲು ನನಗೆ 17 ವರ್ಷಗಳೇ ಬೇಕಾಯಿತು. 17 ದಿನಗಳ ಹಿಂದಷ್ಟೇ ಆಕೆ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ತಿಳಿಯಿತು" ಎಂದು ಅಜಂ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಬಳಿಕ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.