ನವದೆಹಲಿ/ರಾಂಪುರ: 2019 ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ರ್ಯಾಲಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ರಾಂಪುರದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿಗೆ 'ನಿಚ್' ಎಂಬ ಪದವನ್ನು ಬಳಸಿದ್ದಾರೆ.


COMMERCIAL BREAK
SCROLL TO CONTINUE READING

ಟಂಡಾದಲ್ಲಿ ಅಜಂ ಖಾನ್ ವಿರುದ್ಧ ಎಫ್ಐಆರ್ ದಾಖಲು:
ಎಪ್ರಿಲ್ 05 ರಂದು ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುವ ವೇಳೆ ಅಜಂ ಖಾನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ರಾಂಪುರದ ಟಂಡಾದಲ್ಲಿ ಅಜಂ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಜಂ ಖಾನ್ ತಮ್ಮ ಭಾಷಣದ ವೇಳೆ ಯೋಗಿ ಆದಿತ್ಯನಾಥ್ ಅವರನ್ನು 'ನೀಚ್' ಎಂದು ಕರೆಯುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ದೂರಲಾಗಿದೆ.


ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳಿಂದಲೇ ಚರ್ಚೆಯಲ್ಲಿರುವ ಅಜಂ ಖಾನ್, ಇತ್ತೀಚಿಗೆ ಜಿಲ್ಲೆಯ ನಾಲ್ಕು ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅದರ ವಿರುದ್ಧ ಕಾಂಗ್ರೆಸ್ ನಾಯಕರು ಪ್ರಕರಣ ದಾಖಲಿಸಿದ್ದರು. 


ಮಹಾಘಟಬಂಧನ್ ಅಭ್ಯರ್ಥಿ ಅಜಂ ಖಾನ್: 
ಲೋಕಸಭಾ ಚುನಾವಣೆಯಲ್ಲಿ ಅಜಂ ಖಾನ್ ರಾಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜಯಪ್ರದಾ ಕಣದಲ್ಲಿದ್ದಾರೆ.