ಮಹಾರಾಷ್ಟ್ರ: ಭಿವಾಂಡಿಯ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

ಅಗ್ನಿ ದುರಂತದ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

Updated: Aug 21, 2019 , 01:17 PM IST
ಮಹಾರಾಷ್ಟ್ರ: ಭಿವಾಂಡಿಯ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ
Photo Courtesy: ANI

ಭಿವಾಂಡಿ: ನರ್ಪೋಲಿಯ ಚಂದನ್ ಪಾರ್ಕ್ ಬಳಿಯಿರುವ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.

ಅಗ್ನಿ ದುರಂತದ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಈ ಅಗ್ನಿ ದುರಂತದಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಕಾರ್ಖಾನೆಯ ಮಾಲೀಕರ ಪ್ರಕಾರ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ದುರಂತ ಸಂಭವಿಸಿದ್ದು, ಅನಾಹುತ ಸಂಭವಿಸುತ್ತಿದ್ದಂತೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ಕಾರ್ಮಿಕರನ್ನು ತಕ್ಷಣ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದಿದ್ದಾರೆ.