close

News WrapGet Handpicked Stories from our editors directly to your mailbox

ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅನಾಹುತ

 ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರೋಗಶಾಸ್ತ್ರ ಪ್ರಯೋಗಾಲಯದಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಅನಾಹುತ ಸಂಭವಿಸಿದೆ.

Updated: Jul 17, 2019 , 03:42 PM IST
ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅನಾಹುತ

ಶಿಮ್ಲಾ: ಇಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರೋಗಶಾಸ್ತ್ರ ಪ್ರಯೋಗಾಲಯದಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಯಾರಿಗೂ ತೊಂದರೆಯಾಗಿಲ್ಲ ಎಂದು ವರದಿಯಾಗಿದೆ. 

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದವರು ಒಂದು ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. 

ಪ್ರಯೋಗಾಲಯದಲ್ಲಿ ರಾಸಾಯನಿಕಗಳನ್ನು ಇರಿಸಿದ್ದ ಒಂದು ಶೆಲ್ಫ್ ಕೆಳಗೆ ಬಿದ್ದ ಪರಿಣಾಮ ಅದೆಲ್ಲಾ ಬೆರೆತು ಬೆಂಕಿ ಕಾಣಿಸಿಕೊಂಡಿದೆ ಎಂದು ರಾಸಾಯನಿಕಗಳು ಬೆರೆತು ಬೆಂಕಿ ಅವಘಡ ಸಂಭವಿಸಿದೆ ಎಂದು ಹಿರಿಯ ವೈದ್ಯಕೀಯ ಅಧೀಕ್ಷಕ ಐಜಿಎಂಸಿ ಜನಕ್ ರಾಜ್ ಹೇಳಿದ್ದಾರೆ.