ಬೆಂಗಳೂರು: ಯಲಹಂಕ ವಾಯು ನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
Bengaluru: Fire breaks out at car parking area near the venue of #AeroIndia2019 pic.twitter.com/bwIrYx5fzc
— ANI (@ANI) February 23, 2019
ಗೇಟ್ ನಂಬರ್ 5ರ ಬಳಿ ವಾಹನ ನಿಲುಗಡೆ ಮಾಡಿದ್ದ ಜಾಗದಲ್ಲಿ ಈ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.
ಶನಿವಾರ ಮತ್ತು ಭಾನುವಾರ ಸಾರ್ವಜನಿಕರಿಗೆ ವೈಮಾನಿಕ ಪ್ರದರ್ಶನ ನೋಡಲು ಅವಕಾಶ ಕಲ್ಪಿಸಲಾಗಿದೆ. ವೈಮಾನಿಕ ಪ್ರದರ್ಶನ ವೀಕ್ಷಿಸಲು ಜನಸಾಗರವೇ ಹರಿದು ಬಂದಿದೆ. ಈ ಮಧ್ಯೆ ಸಾವಿರಾರು ವಾಹನಗಳನ್ನು ನಿಲುಗಡೆ ಮಾಡಲಾಗಿದ್ದ ಪಾರ್ಕಿಂಗ್ ಸ್ಥಳದಲ್ಲಿ ಎಂಜಿನ್ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅನಾಹುತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರುಗಳು ಅಗ್ನಿಗಾಹುತಿಯಾಗಿವೆ. ಸ್ಥಳದಲ್ಲಿ ದಟ್ಟ ಹೋಗೆ ಆವರಿಸಿಕೊಂಡಿದೆ.
Karnataka: According to the fire department, 80-100 cars gutted in fire near the venue of #AeroIndia2019 in Bengaluru pic.twitter.com/pwpTKDzIgT
— ANI (@ANI) February 23, 2019
ಪಾರ್ಕಿಂಗ್ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಹೋಗೆ ಕಾಣಿಸಿಕೊಂಡ ಕೆಲ ನಿಮಿಷಗಳಲ್ಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಪೋಲಿಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.