ಬೆಂಗಳೂರು: ಯಲಹಂಕ ವಾಯು ನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ  ಶೋ ಪ್ರದರ್ಶನದ ವೇಳೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.



COMMERCIAL BREAK
SCROLL TO CONTINUE READING

ಗೇಟ್ ನಂಬರ್ 5ರ ಬಳಿ ವಾಹನ ನಿಲುಗಡೆ ಮಾಡಿದ್ದ ಜಾಗದಲ್ಲಿ ಈ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.


ಶನಿವಾರ ಮತ್ತು ಭಾನುವಾರ ಸಾರ್ವಜನಿಕರಿಗೆ ವೈಮಾನಿಕ ಪ್ರದರ್ಶನ ನೋಡಲು ಅವಕಾಶ ಕಲ್ಪಿಸಲಾಗಿದೆ. ವೈಮಾನಿಕ ಪ್ರದರ್ಶನ ವೀಕ್ಷಿಸಲು ಜನಸಾಗರವೇ ಹರಿದು ಬಂದಿದೆ.  ಈ ಮಧ್ಯೆ ಸಾವಿರಾರು ವಾಹನಗಳನ್ನು ನಿಲುಗಡೆ ಮಾಡಲಾಗಿದ್ದ ಪಾರ್ಕಿಂಗ್ ಸ್ಥಳದಲ್ಲಿ ಎಂಜಿನ್ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅನಾಹುತ ಸಂಭವಿಸಿದ್ದು, 50ಕ್ಕೂ ಹೆಚ್ಚು ಕಾರುಗಳು ಅಗ್ನಿಗಾಹುತಿಯಾಗಿವೆ. ಸ್ಥಳದಲ್ಲಿ ದಟ್ಟ ಹೋಗೆ ಆವರಿಸಿಕೊಂಡಿದೆ.



ಪಾರ್ಕಿಂಗ್ ಪ್ರದೇಶದಲ್ಲಿ ಯಾರೂ ಇರಲಿಲ್ಲ. ಹೋಗೆ ಕಾಣಿಸಿಕೊಂಡ ಕೆಲ ನಿಮಿಷಗಳಲ್ಲೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಪೋಲಿಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.