ಸಿಕಂದರಾಬಾದ್ನ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ: 7 ಸಾವು; 5 ಮಂದಿಗೆ ಗಾಯ
ತೆಲಂಗಾಣದ ಸಿಕಂದರಾಬಾದ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ನಾಲ್ಕು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಅದೇ ವೇಳೆ ಅಪಘಾತದಲ್ಲಿ 5 ಮಂದಿ ಗಾಯಗೊಂಡಿದ್ದಾರೆ.
ಸಿಕಂದರಾಬಾದ್ ಬೆಂಕಿ ಅನಾಹುತ: ಸೋಮವಾರ ತಡರಾತ್ರಿ ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ಕು ಅಂತಸ್ತಿನ ಹೋಟೆಲ್‌ನಲ್ಲಿ ತಂಗಿದ್ದ 7 ಮಂದಿ ಸಾವನ್ನಪ್ಪಿದ್ದು, ಐದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅಪಘಾತ ಸ್ಥಳದಲ್ಲಿ ಬೀಡು ಬಿಟ್ಟಿರುವ ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿವಿ ಆನಂದ್, ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ- Video viral : ನಡುರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದಾಡಿಕೊಂಡ ವ್ಯಕ್ತಿಗಳು
ಹೊಟೇಲ್ ರೂಬಿಯಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವು ಅತಿಥಿಗಳು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದರು. ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಭಯಭೀತರಾದ ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು. ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇವಿ ಬೈಕ್ ಶೋರೂಂನ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಮೇಲಿನ ಮಹಡಿಗಳಿಗೂ ವ್ಯಾಪಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿವಿ ಆನಂದ್ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ- Video : ಸ್ಕೂಟಿ ಕೆಟ್ಟು ನಿಂತಿದ್ದರೂ ಕೆಳಗಿಳಿಯಲಿಲ್ಲ ಪ್ರಿಯತಮೆ, ನಂತರದ ಘಟನೆ ನೋಡಿದರೆ ನಗು ತಡೆಯಲು ಸಾಧ್ಯವಿಲ್ಲ
ಶೋರೂಮ್‌ನಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದ ಕೆಲವರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯುಲು ಮತ್ತು ಅವರ ಸಿಬ್ಬಂದಿಯೊಂದಿಗೆ ಕೆಲವು ಯುವಕರು ಪಕ್ಕದ ಹೋಟೆಲ್ ಯಾತ್ರಿ ಇನ್‌ನಿಂದ ಕಟ್ಟಡದ ಮೇಲಿನ ಮಹಡಿಗೆ ಧಾವಿಸಿದರು. ಈ ಸಂದರ್ಭದಲ್ಲಿ ಕಾರಿಡಾರ್‌ನಲ್ಲಿ ಕೆಲವು ಅತಿಥಿಗಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ.
ಇತರ ಮಹಡಿಗಳಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸಮೀಪದ ಅಗ್ನಿಶಾಮಕ ಠಾಣೆಯ ಎರಡು ಅಗ್ನಿಶಾಮಕ ಟೆಂಡರ್‌ಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಅಲ್ಲಿದ್ದವರನ್ನು ರಕ್ಷಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.