ಮಧುರೈ: ಇತಿಹಾಸ ಪ್ರಸಿದ್ಧ ಮಧುರೈ ಮಿನಾಕ್ಷಿ ದೇವಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. 


COMMERCIAL BREAK
SCROLL TO CONTINUE READING

ಈಗಾಗಲೇ 5ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ಸಿಬಂದಿಗಳು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಅದೃಷ್ಟವಷಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ. 



ಗೊಂಬೆಗಳ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.