ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಿನಿಮಾ ಮಂದಿರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ವಿಶಾಖಪಟ್ಟಣದ ಗಜುವಾಕ ಪ್ರದೇಶದಲ್ಲಿರುವ ಶ್ರೀ ಕನ್ಯಾ ಸಿನೆಮಾ ಹಾಲ್ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.



COMMERCIAL BREAK
SCROLL TO CONTINUE READING

ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ. ಈ ವರೆಗೂ ಯಾವುದೇ ಜೀವ ಹಾನಿ ಆಗಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣ ಏನೆಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.