ನವದೆಹಲಿ: ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಎಸ್‌ಬಿಐ ಕಟ್ಟಡದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಎಸ್‌ಬಿಐ ಕಟ್ಟಡದಲ್ಲಿ ಕಾಣಿಸಿಕೊಂಡ  ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ 10 ರಿಂದ 12 ವಾಹನಗಳು ತಲುಪಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ.


ಆರಂಭಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಟ್ಟಡದ ಆರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.


ದೆಹಲಿಯಲ್ಲಿ ನಿರಂತರ ಮಳೆಯಿಂದಾಗಿ, ಬೆಂಕಿಯು ಹೆಚ್ಚಾಗಿ ಹರಡಿಲ್ಲ ಎನ್ನಲಾಗಿದೆ. ಈ ದುರ್ಘಟನೆಯಲ್ಲಿ ಹಾನಿಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.