ದೆಹಲಿಯ ಶೂ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. 

Last Updated : Feb 19, 2019, 10:36 AM IST
ದೆಹಲಿಯ ಶೂ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ title=

ನವದೆಹಲಿ: ಶೂ ಫ್ಯಾಕ್ಟರಿಯೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಘಟನೆ ದೆಹಲಿಯ ನರೇಲಾ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಕೂಡಲೇ 12ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳೂ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಆದರೆ, ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
 

Trending News