ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯ ಪಟೇಲ್ ವೆಲ್ ಫೇರ್ ಆಸ್ಪತ್ರೆಯಲ್ಲಿ (Fire in Patel Welfare Hospital) ದೊಡ್ಡ ಅಪಘಾತ ಸಂಭವಿಸಿದ್ದು, ತಡರಾತ್ರಿ ಸಂಭವಿಸಿದ ಈ ಅಗ್ನಿ ಅಪಘಾತದಲ್ಲಿ 16 ಜನರು ಸಜೀವ ದಹನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಕರೋನಾ ರೋಗಿಗಳಿಗಾಗಿ ನಿರ್ಮಿಸಲಾಗಿರುವ ಕೋವಿಡ್ ಕೇರ್ ಸೆಂಟರ್ (Covid care center) ನಲ್ಲಿ ತಡರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು 16 ಕರೋನಾ ರೋಗಿಗಳು (Corona Patient) ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Gujarat| Fire breaks out at a COVID-19 care centre in Bharuch. Affected patients are being shifted to nearby hospitals. Details awaited. pic.twitter.com/pq88J0eRXY
— ANI (@ANI) April 30, 2021
ನಾಲ್ಕು ಅಂತಸ್ತಿನ ಆಸ್ಪತ್ರೆಯಲ್ಲಿ ಒಟ್ಟು 70 ರೋಗಿಗಳನ್ನು ದಾಖಲಿಸಲಾಗಿದ್ದು, ಅವರಲ್ಲಿ 24 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ - Coronavirus recovery: ಮನೆಯಲ್ಲಿದ್ದುಕೊಂಡು ಎರಡೇ ವಾರದಲ್ಲಿ ಕರೋನಾವನ್ನು ಹೊಡೆದೋಡಿಸಬಹುದು..!
ಶಾರ್ಟ್ ಸರ್ಕ್ಯೂಟ್ನಿಂದ ಉಂಟಾಗಿರುವ ಅನಾಹುತ:
ಅಪಘಾತದ ಬಗ್ಗೆ ಮಾಹಿತಿ ನೀಡಿರುವ ಭರೂಚ್ ಪೊಲೀಸರು, "ಪ್ರಾಥಮಿಕ ಮಾಹಿತಿಯ ಪ್ರಕಾರ, ಭರೂಚ್ನಲ್ಲಿ ತಡರಾತ್ರಿ 12: 30 ರ ಸುಮಾರಿಗೆ ಪಟೇಲ್ ವೆಲ್ಫೇರ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ (Covid care center) ನ ಐಸಿಯುನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ 16 ಜನರು ಸಾವನ್ನಪ್ಪಿದ್ದಾರೆ" ಎಂದು ಹೇಳಿದರು.
ಇದನ್ನೂ ಓದಿ - Ayurvedic Medicine To Cure Corona: Corona ಸೋಂಕಿನ ಸಾಮಾನ್ಯ-ಮಧ್ಯಮ ಲಕ್ಷಣಗಳಿಗೆ ಪರಿಣಾಮಕಾರಿ ಈ ಆಯುರ್ವೇದ ಔಷಧಿ!
ಈ ಬಗ್ಗೆ ಮಾಹಿತಿ ನೀಡಿರುವ ಭರೂಚ್ ಎಸ್ಪಿ ರಾಜೇಂದ್ರ ಸಿಂಗ್ ಚುಡಾಸಮಾ ಅವರು ಶಾರ್ಟ್ ಸರ್ಕ್ಯೂಟ್ನಿಂದ ಕೋವಿಡ್ ಆರೈಕೆ ಕೇಂದ್ರದ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ, ಆದರೆ ನಂತರ ಬೆಂಕಿಯನ್ನು ನಿಯಂತ್ರಿಸಲಾಯಿತು ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.