ಅಹಮದಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಘಟನೆಯಲ್ಲಿ ಸುಮಾರು 25 ಮಂದಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. 

Updated: Jul 26, 2019 , 03:34 PM IST
ಅಹಮದಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಅಹಮದಾಬಾದ್: ಇಲ್ಲಿನ ಗೋಟಾ ಪ್ರದೇಶದಲ್ಲಿನ ಗಣೇಶ್ ಜೆನೆಸಿಸ್ ವಸತಿ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಉಳಿದಂತೆ ಸುಮಾರು 25 ಮಂದಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ರಾಜೇಶ್ ಭಟ್ ತಿಳಿಸಿದ್ದಾರೆ.

ಕಟ್ಟಡದ 5 ಮತ್ತು 6ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಇತರೆಡೆಗೆ ವ್ಯಾಪಿಸಿದೆ ಎನ್ನಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ಅವಘಡಕ್ಕೆ ಕಾರಣವೇನು ಎಂದು ಪರಿಶೀಲನೆ ನಡೆಸಿದ್ದಾರೆ ಎಂದು ರಾಜೇಶ್ ಭಟ್ ಮಾಹಿತಿ ನೀಡಿದ್ದಾರೆ.