ಬಿಸ್ಕೆಟ್ ಫ್ಯಾಕ್ಟರಿ ಗೋದಾಮಿಗೆ ಬೆಂಕಿ, ಕೋಟ್ಯಂತರ ರೂ. ಆಸ್ತಿ ನಷ್ಟ

ವಿದ್ಯುತ್ ಶಾರ್ಟ್-ಸರ್ಕ್ಯೂಟ್ ನಿಂದಾಗಿ ಬೆಂಕಿ ಸಂಭವಿಸಿರುವ ಸಾಧ್ಯತೆಯಿದೆ. ಬೆಂಕಿ ಅನಾಹುತದಿಂದಾಗಿ ಕೋಟ್ಯಂತರ ರೂ. ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. 

Updated: Aug 3, 2019 , 11:38 AM IST
ಬಿಸ್ಕೆಟ್ ಫ್ಯಾಕ್ಟರಿ ಗೋದಾಮಿಗೆ ಬೆಂಕಿ, ಕೋಟ್ಯಂತರ ರೂ. ಆಸ್ತಿ ನಷ್ಟ

ಕೃಷ್ಣ: ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೊನಾಟನಪಾಡು ಗ್ರಾಮದಲ್ಲಿ ಬ್ರಿಟಾನಿಯಾ ಬಿಸ್ಕಟ್ ಕಾರ್ಖಾನೆಯ ಗೋದಾಮಿನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 

ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ. 