ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ(ಐಜಿಐ) ನಿಂತಿದ್ದ ಏರ್ ಇಂಡಿಯಾ ಬೋಯಿಂಗ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ನ್ಯೂಸ್ ಏಜೆನ್ಸಿಯ ಪ್ರಕಾರ, ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋ ನಡುವೆ ಸಂಚರಿಸುವ ಏರ್ ಇಂಡಿಯಾ ಫ್ಲೈಟ್ (B777-200 ಎಲ್ಆರ್) ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದ ಸಮಯದಲ್ಲಿ ವಿಮಾನದಲ್ಲಿ ಎಸಿ ರಿಪೇರಿ ನಡೆಯುವ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದ್ದು, ತಕ್ಷಣ ಎಚ್ಚೆತ್ತ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.



ಎಂಜಿನಿಯರ್ ಗಳು ವಿಮಾನದಲ್ಲಿ ದೈನಂದಿನ ಪರೀಕ್ಷೆ(ರೊಟೀನ್ ಚೆಕ್) ನಡೆಸುವ ವೇಳೆ ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.