ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಆಕಾಶವಾಣಿ ಭವನದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳ ಸ್ಥಳಕ್ಕೆ ತಲುಪಿತು ಮತ್ತು ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಿಸಲಾಯಿತು.
ಈ ಅವಘಡದ ಬಗ್ಗೆ ಮಾಹಿತಿ ನೀಡಿರುವ ದೆಹಲಿ (Delhi) ಅಗ್ನಿಶಾಮಕ ಸೇವೆಯ (ಡಿಎಫ್‌ಎಸ್) ಅಧಿಕಾರಿಯೊಬ್ಬರು ಬೆಂಕಿಯಿಂದ ಸುಟ್ಟ ಅಥವಾ ಗಾಯಗಳ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ - Maharashtra: ಆಸ್ಪತ್ರೆಯಲ್ಲಿ ಭೀಕರ ಬೆಂಕಿ, 10 ಅಮಾಯಕ ಮಕ್ಕಳ ಸಜೀವ ದಹನ
ಬೆಂಕಿ ನಂದಿಸಲು 8 ಅಗ್ನಿಶಾಮಕ ವಾಹನ :
ಮುಂಜಾನೆ 5.57ರ ಸುಮಾರಿಗೆ ಕಟ್ಟಡದಲ್ಲಿ ಬೆಂಕಿ (Fire) ಕಾಣಿಸಿಕೊಂಡಿದೆ ಎಂದು ಡಿಎಫ್‌ಎಸ್ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ. ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ಯಂತ್ರಗಳನ್ನು ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಕೊಠಡಿ ಸಂಖ್ಯೆ 101 ರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಡಿಎಫ್‌ಎಸ್ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.
ಇದನ್ನೂ ಓದಿ - ಗುಜರಾತ್: ವಲ್ಸಾದ್‌ನ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ
ಆದರೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ವರದಿ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ ಎಂಜಿನಿಯರ್ಸ್ ಕಟ್ಟಡದಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಿಯರ್‌ಗಳ ಭವನದಲ್ಲಿ 12 ಅಗ್ನಿಶಾಮಕ ಯಂತ್ರಗಳು ಬೆಂಕಿಯನ್ನು ನಂದಿಸುವಲ್ಲಿ ತೊಡಗಿದ್ದವು. ಈ ಸಮಯದಲ್ಲಿ ಕೆಲವು ಉದ್ಯೋಗಿಗಳು ಕಟ್ಟಡದ ಛಾವಣಿಯ ಮೇಲೆ ಸಿಲುಕಿಕೊಂಡಿದ್ದರು ಅಗ್ನಿಶಾಮಕ ದಳದವರು ಅವರೆಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.