ಭಂಡಾರ: ಮಹಾರಾಷ್ಟ್ರದ ನಾಗ್ಪುರದ ಭಂಡಾರದ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶು  ಆರೈಕೆ ಘಟಕದಲ್ಲಿ (SNCU) ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹತ್ತು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.


Hospital) ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳವು ಆಸ್ಪತ್ರೆಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಬೆಂಕಿ (Fire) ಯನ್ನು ನಂದಿಸಿದ ನಂತರ, ಪೊಲೀಸ್ ತಂಡವು ಸ್ಥಳಕ್ಕೆ ತಲುಪಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಮಾಹಿತಿಯ ಪ್ರಕಾರ ನವಜಾತ ಆರೈಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಕ್ಷಣವೇ ಇಡೀ ವಾರ್ಡ್ ಗೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ : 'ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ, ಲಾಕ್‌ಡೌನ್‌ ಇಲ್ಲ'


ನವಜಾತ (Newborn) ಶಿಶುಗಳ ಆಘಾತಕಾರಿ ಸಾವಿನ ನಂತರ ಅವರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಯಲ್ಲಿ ಅದು ಕೂಡ ಮಕ್ಕಳ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಶೀಘ್ರವೇ ತನಿಖೆ ನಡೆಯಲೇ ಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದೇ ಸಮಯದಲ್ಲಿ ಆಸ್ಪತ್ರೆಯ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎಂದು ಜನರು ಆಸ್ಪತ್ರೆಯ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಲು ಮತ್ತಷ್ಟು ಸಮಯ ಕೇಳಿದ ವರ್ಷಾ ರಾವತ್

ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಘಟನೆಗೆ ಸಂಬಂಧಿಸಿದಂತೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಆರೋಗ್ಯ ಸಚಿವ ರಾಜೇಶ್ ಟೊಪೆ ಮತ್ತು ಭಂಡಾರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ್ದು ತನಿಖೆಗೆ ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಮ್ಒ) ಮಾಹಿತಿ ನೀಡಿದೆ.


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.