Fire in Lab: ಆಂಧ್ರಪ್ರದೇಶದ ಕೆಮಿಕಲ್ ಲ್ಯಾಬ್ನಲ್ಲಿ ಅಗ್ನಿ ಅವಘಡ, 6 ಮಂದಿ ಸಾವು
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಮ್ನಲ್ಲಿರುವ ಪೋರಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬುಧವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಆರು ಜನರು ಸಾವನ್ನಪ್ಪಿದ್ದಾರೆ.
ರಾಸಾಯನಿಕ ತಯಾರಿಕಾ ಘಟಕದಲ್ಲಿ ಬೆಂಕಿ: ಆಂಧ್ರಪ್ರದೇಶದ ಪೋರಸ್ ಲ್ಯಾಬ್ಸ್ ಲಿಮಿಟೆಡ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ಕೆಮಿಕಲ್ ಮ್ಯಾನುಫ್ಯಾಕ್ಚರಿಂಗ್ ಘಟಕದಲ್ಲಿ ಬುಧವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ರಾಸಾಯನಿಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಜಯವಾಡದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ- Raj Thackeray: ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಪ್ರಕರಣ
ಬಲಿಯಾದವರಲ್ಲಿ ಹೆಚ್ಚಿನವರು ಬಿಹಾರದ ನಿವಾಸಿಗಳು:
17 ಕಾರ್ಮಿಕರು ಕೆಲಸ ಮಾಡುತ್ತಿದ್ದ ಕೆಮಿಕಲ್ ಫ್ಯಾಕ್ಟರಿಯ ಎರಡು ಮಹಡಿಗಳಿಗೆ ಬೆಂಕಿ ಆವರಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಬಿಹಾರದ ನಿವಾಸಿಗಳಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ಪೋರಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- 7th Pay Commission : ಕೇಂದ್ರ ನೌಕರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಬಿಗ್ ರಿಲೀಫ್!
ಬೆಂಕಿಗೆ ಕಾರಣ ತಿಳಿದುಬಂದಿಲ್ಲ:
ಪಶ್ಚಿಮ ಗೋದಾವರಿ ಜಿಲ್ಲಾ ಎಸ್ಪಿ ರಾಹುಲ್ ದೇವ್ ಶರ್ಮಾ ಮಾತನಾಡಿ, 'ಪಾಲಿಮರ್ ತಯಾರಿಸುವ ಪೋರಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗ್ಯಾಸ್ ಪೈಪ್‌ಲೈನ್‌ನಲ್ಲಿ ಸೋರಿಕೆ ಅಥವಾ ಒಡೆಯುವಿಕೆಯಿಂದ ಈ ಘಟನೆ ಸಂಭವಿಸಬಹುದು. ಬೆಂಕಿ ಹೊತ್ತಿಕೊಂಡ ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದನ್ನು ಹತೋಟಿಗೆ ತರಲಾಗಿದೆ. ನಾವು ಎರಡು ಶವಗಳನ್ನು ಹೊರತೆಗೆದಿದ್ದೇವೆ, ಮೊದಲ ಮಹಡಿಯಿಂದ ಇನ್ನೂ ನಾಲ್ವರನ್ನು ಹೊರತೆಗೆಯಬೇಕಾಗಿದೆ. 11 ಗಾಯಾಳುಗಳನ್ನು ವಿಜಯವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.