Fire In Hospital: ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, ನಾಲ್ಕು ಮಂದಿ ಸಾವು
ಅಪಘಾತದ ಬಗ್ಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಅಧಿಕಾರಿಗಳು ಆಸ್ಪತ್ರೆಯಿಂದ 20 ರೋಗಿಗಳನ್ನು ರಕ್ಷಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಹೇಳಿದರು.
ಥಾಣೆ: ಮಹಾರಾಷ್ಟ್ರದ (Maharashtra) ಥಾಣೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಲ್ಲಿ ನಾಲ್ಕು ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮುಮ್ರಾ ಪ್ರದೇಶದ ಕೌಸಾದ ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದೆ.
ಅಪಘಾತದಲ್ಲಿ 4 ಜನರು ಸಾವನ್ನಪ್ಪಿದ್ದಾರೆ:
ಥಾಣೆ (Thane) ಮುನ್ಸಿಪಲ್ ಕಾರ್ಪೊರೇಷನ್ ಪ್ರಕಾರ, ಪ್ರೈಮ್ ಕ್ರಿಟಿಕೇರ್ ಆಸ್ಪತ್ರೆಯಲ್ಲಿ (Hospital) ಬುಧವಾರ ಮುಂಜಾನೆ 3.40 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಾಗ 4 ಜನರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ಎರಡು ಅಗ್ನಿಶಾಮಕ ದಳ ಮತ್ತು ಪಾರುಗಾಣಿಕಾ ವಾಹನವಿದೆ. ಬೆಂಕಿಯನ್ನು ನಂದಿಸುವ ಕೆಲಸ ಪ್ರಗತಿಯಲ್ಲಿದೆ.
ಕರೋನಾ ಬಿಕ್ಕಟ್ಟಿನ ಮಧ್ಯೆ Covid ಸೆಂಟರ್‌ನ ಐಸಿಯು ವಾರ್ಡ್‌ನಲ್ಲಿ ಬೆಂಕಿ; 13 ರೋಗಿಗಳ ಸಜೀವ ದಹನ
ಪಾರುಗಾಣಿಕಾ ಕಾರ್ಯಾಚರಣೆ ಮುಂದುವರೆದಿದೆ
ಅಪಘಾತದ ಬಗ್ಗೆ ಮಾಹಿತಿ ನೀಡಿದ ಥಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಆಸ್ಪತ್ರೆಯಿಂದ 20 ರೋಗಿಗಳನ್ನು ರಕ್ಷಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ ಎಂದು ತಿಳಿಸಿದರು.
ಆಸ್ಪತ್ರೆಯ ಐಸಿಯು (ICU) ನಲ್ಲಿ 6 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರನ್ನೂ ಕೂಡ ರಕ್ಷಿಸಾಲಾಗಿದೆ. ಆದಾಗ್ಯೂ, ಅವರಲ್ಲಿ ಯಾರೂ ಕರೋನಾ ರೋಗಿಯಾಗಿರಲಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ- ಹದಿನೈದು ವರ್ಷ ಕೆಲಸಕ್ಕೆ ಚಕ್ಕರ್, ಆದರೂ ತಿಂಗಳ ಕೊನೆಗೆ ಬರುತ್ತಿತ್ತು ಸ್ಯಾಲರಿ
ಮೃತ ಮತ್ತು ಗಾಯಗೊಂಡವರಿಗೆ ಸರ್ಕಾರದಿಂದ ಪರಿಹಾರ:
ಅದೇ ಸಮಯದಲ್ಲಿ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಈ ಅಪಘಾತದ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯ ಶಾಸಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವರಾದ ಜಿತೇಂದ್ರ ಅವನ್ ಹೇಳಿದ್ದಾರೆ. ಸತ್ತವರಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.