ಡೆಹ್ರಾಡೂನ್‌ : ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು,  4 ಮಂದಿ ಮೃತಪಟ್ಟಿದ್ದಾರೆ. ಡೆಹ್ರಾಡೂನ್‌ನ ಚಕರತಾ ತಹಸಿಲ್‌ನ ಟಿಯುನಿ ಪ್ರದೇಶದಲ್ಲಿ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ನಂತರ 4 ಹುಡುಗಿಯರು ಬೆಂಕಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ.  ಮೃತ ನಾಲ್ಕು ಮಂದಿ ಎರಡೂವರೆ ವರ್ಷದಿಂದ 12 ವರ್ಷದೊಳಗಿನವರು ಎನ್ನಲಾಗಿದೆ. ಸುಮಾರು 5 ಗಂಟೆಗಳ ಪರಿಶ್ರಮದ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಯಿತು. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. 


COMMERCIAL BREAK
SCROLL TO CONTINUE READING

ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಮಂದಿ ಬಲಿ  :
ತುಣಿ ಸೇತುವೆ ಬಳಿಯ ಮನೆಯೊಂದರಲ್ಲಿ ಎರಡು ಕುಟುಂಬಗಳು ವಾಸವಾಗಿವೆ. ಗುರುವಾರ ಸಂಜೆ ಘಟನೆ ನಡೆದಾಗ ಈ ಮಕ್ಕಳ ತಾಯಂದಿರು ಬಟ್ಟೆ ಒಗೆಯಲು ಮನೆಯಿಂದ ಹೊರಗೆ ಹೋಗಿದ್ದರು. ಇದಲ್ಲದೆ, ಬೆಂಕಿ ಹೊತ್ತಿಕೊಂಡ ಸಂದರ್ಭ ಓರ್ವ ವ್ಯಕ್ತಿ ಮತ್ತು ಮತ್ತೊಬ್ಬ  ಹುಡುಗ ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. 


ಇದನ್ನೂ ಓದಿ : ಕಾಶ್ಮೀರದಲ್ಲಿ ಬಂಧನಕ್ಕೊಳಗಾದ ನಕಲಿ ಅಧಿಕಾರಿ ಗುಜರಾತ್ ಪೊಲೀಸರಿಗೆ ಹಸ್ತಾಂತರ


ಬೆಂಕಿ ಹತ್ತಿಕೊಳ್ಳಲು ಕಾರಣ : 
ಪ್ರತ್ಯಕ್ಷದರ್ಶಿಗಳ ಪ್ರಕಾರ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ನಂತರವಷ್ಟೇ ತಿಳಿಯಲಿದೆ. 


ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಇಂದು  ಚಕರಾತ ತಿಯುನಿ ಸೇತುವೆ ಬಳಿಯ 4 ಅಂತಸ್ತಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲವರು ಮೃತಪಟ್ಟಿರುವ ಸುದ್ದಿ ತಿಳಿದು ಬಂದಿದೆ. ಅಲ್ಲಿ ವಾಸಿಸುವ ಕುಟುಂಬಗಳು ಕ್ಷೇಮವಾಗಿರಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ. 


ಇದನ್ನೂ ಓದಿ : ಮಿಡ್ ನೈಟ್ ಹೈ ಡ್ರಾಮಾ ಬಂಧನದ ನಂತರ ಬಂಡಿ ಸಂಜಯ್ ಕುಮಾರ್ ಗೆ ಜಾಮೀನು


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.