ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ ಬಳಿಕ ಎರಡನೇ ಅವಧಿಗೆ ಸರ್ಕಾರ ರಚಿಸಿ ಪ್ರಧಾನಿಯಾದ ಬೆನ್ನಲ್ಲೇ, ನರೇಂದ್ರ ಮೋದಿ ಅವರು ಇಂದು(ಜೂನ್ 30) ಬೆಳಿಗ್ಗೆ 11 ಗಂಟೆಗೆ ತಮ್ಮ ಎರಡನೇ ಅವಧಿಯ ಮೊದಲ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದಲ್ಲಿ ಏಕಕಾಲದಲ್ಲಿ ಪ್ರಸಾರವಾಗಲಿದ್ದು, ನರೇಂದ್ರ ಮೋದಿ ಆ್ಯಪ್‌ ಮತ್ತು ಯೂಟ್ಯೂಬ್‌ ಚಾನಲ್‌ನಲ್ಲಿಯೂ ನೇರ ಪ್ರಸಾರವಾಗಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.


[[{"fid":"178351","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಕ್ಷದ ಇತರ ಕಾರ್ಯಕರ್ತರೊಂದಿಗೆ ದ್ವಾರಕಾದ ಕಾಕ್ರೋಲಾ ಕ್ರೀಡಾಂಗಣದಲ್ಲಿ ರೇಡಿಯೋ ಕಾರ್ಯಕ್ರಮವನ್ನು ಕೇಳಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಅದ್ಭುತ ಗೆಲುವಿನ ಬಳಿಕ ಮತ್ತಷ್ಟು ಉತ್ಸಾಹದಿಂದಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮವನ್ನು ಮತ್ತಷ್ಟು ಜನರಿಗೆ ತಲುಪಿಸುವ ಗುರಿ ಹೊಂದಿದ್ದು, ಸಾಧ್ಯವಿರುವ ಎಲ್ಲ ವಿಧಾನಗಳನ್ನು ಬಳಸಿಕೊಳ್ಳಲು ಯೋಜಿಸಿದೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ರೇಡಿಯೋ ಸೆಟ್ ಗಳ ವ್ಯವಸ್ಥೆಗೆ ಬಿಜೆಪಿ ಮುಂದಾಗಿದೆ. 


ಪ್ರಧಾನಿ ಮೋದಿ ಅವರು ಈ ವರ್ಷದ ಫೆಬ್ರವರಿಯಲ್ಲಿ ಕೊನೆಯದಾಗಿ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ವಿಜಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರಲ್ಲದೆ, ಚುನಾವಣೆಯ ನಂತರ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆ ಎಂದು ತಿಳಿಸಿದ್ದರು.