Lok Sabha Election 2024: ಮುಂಬರುವ ಲೋಕಸಭಾ ಚುನಾವಣೆಗೆ ಮೊದಲ ಹಂತದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತೀಯ ಚುನಾವಣಾ ಆಯೋಗ ( ಇಸಿಐ) ಮಾರ್ಚ್ 20 ರಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಿದೆ.  ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.


COMMERCIAL BREAK
SCROLL TO CONTINUE READING

ಭಾರತೀಯ ಚುನಾವಣಾ ಆಯೋಗ 2024ರ ಲೋಕಸಭಾ ಚುನಾವಣೆಯನ್ನು ಒಟ್ಟು 7 ಹಂತಗಳಲ್ಲಿ ನಡೆಸುವುದಾಗಿ ಘೋಷಿಸಿದೆ. ಮೊದಲ ಹಂತದ ಚುನಾವಣೆಯು ಏಪ್ರಿಲ್ 19, 2024ರಂದು ನಡೆಯಲಿದೆ. 


ಏಪ್ರಿಲ್ 19 ರಂದು ನಿಗದಿಯಾಗಿರುವ ಲೋಕಸಭೆ ಚುನಾವಣೆ 2024 ರ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯು ಇಂದಿನಿಂದ ಎಂದರೆ ಮಾರ್ಚ್ 20 ರಂದು ಪ್ರಾರಂಭವಾಗಿದೆ. ಅಭ್ಯರ್ಥಿಗಳು ತಮ್ಮ ತಮ್ಮ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 27 ಕೊನೆಯ ದಿನವಾಗಿದ್ದು, ಮಾರ್ಚ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 30 ಕೊನೆಯ ದಿನವಾಗಿದೆ.


ಇದನ್ನೂ ಓದಿ- Lok Sabha Election 2024: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಐಎಡಿಎಂಕೆ


ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಸ್ಥಾನಗಳಲ್ಲಿ ತಮಿಳುನಾಡಿನ ಮೂವತ್ತೊಂಬತ್ತು ಲೋಕಸಭಾ ಕ್ಷೇತ್ರಗಳು, ರಾಜಸ್ಥಾನದ 12  ಲೋಕಸಭಾ ಕ್ಷೇತ್ರಗಳು, ಉತ್ತರ ಪ್ರದೇಶದ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ ಐದು ಸ್ಥಾನಗಳು, ಬಿಹಾರದ ನಾಲ್ಕು ಸ್ಥಾನಗಳು, ಪಶ್ಚಿಮ ಬಂಗಾಳದ ಮೂರು ಸ್ಥಾನಗಳು, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದಲ್ಲಿ ತಲಾ ಎರಡು ಸ್ಥಾನಗಳು ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಲೋಕಸಭಾ ಕ್ಷೇತ್ರ ಸೇರಿದೆ. 


ಇದನ್ನೂ ಓದಿ- ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ‌ವೈ ವಿಜಯೇಂದ್ರ


ಲೋಕಸಭಾ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಪ್ರದೇಶದ ಪ್ರಮುಖ ಎಂಟು ಲೋಕಸಭಾ ಕ್ಷೇತ್ರಗಳೆಂದರೆ:- ಸಹರಾನ್‌ಪುರ, ಕೈರಾನಾ, ಮುಜಾಫರ್‌ನಗರ, ಬಿಜ್ನೋರ್, ನಗೀನಾ (ಎಸ್‌ಸಿ), ಮೊರಾದಾಬಾದ್, ರಾಂಪುರ್ ಮತ್ತು ಪಿಲಿಭಿತ್. 


ರಾಜಸ್ಥಾನದ 12  ಲೋಕಸಭಾ ಕ್ಷೇತ್ರಗಳು ಯಾವುವೆಂದರೆ:- ಗಂಗಾನಗರ್, ಬಿಕಾನೇರ್, ಚುರು, ಜುಂಜುನು, ಸಿಕರ್, ಜೈಪುರ ಗ್ರಾಮಾಂತರ, ಜೈಪುರ, ಅಲ್ವಾರ್, ಭರತ್‌ಪುರ್, ಕರೌಲಿ-ಧೋಲ್‌ಪುರ್, ದೌಸಾ ಮತ್ತು ನಾಗೌರ್ ಲೋಕಸಭಾ ಕ್ಷೇತ್ರಗಳು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.